ಸೋಮವಾರ, ಫೆಬ್ರವರಿ 24, 2020
19 °C

SSLC, DEGREE, P.hd ವ್ಯಾಸಂಗ ಮಾಡುತ್ತಿರುವವರಿಗೆ ವಿದ್ಯಾರ್ಥಿ ವೇತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಷ್ಟ್ರೀಯ ಸಾಲ ಪರಿಹಾರ ವಿದ್ಯಾರ್ಥಿವೇತನ 2019

ವಿವರ: ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್‌ ಮತ್ತು ಗಣಿತ ವಿಷಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಾಲ ಪರಿಹಾರ ವಿದ್ಯಾರ್ಥಿವೇತನ ದೊರೆಯಲಿದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ದೊರೆಯಲಿದೆ.

ಅರ್ಹತೆ: ಪ್ರೌಢಶಾಲೆಯಲ್ಲಿ ಕನಿಷ್ಠ 3.0 ಜಿಪಿಎ ಪಡೆದು ಅಮೆರಿಕದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಕಾಲೇಜ್‌ನಲ್ಲಿ ನಾಲ್ಕು ವರ್ಷದ ಪದವಿ ಕೋರ್ಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಆರ್ಥಿಕ ನೆರವು: ಆಯ್ಕೆಯಾಗುವ ಐದು ವಿದ್ಯಾರ್ಥಿಗಳಿಗೆ ತಲಾ 1,000 ಅಮೆರಿಕನ್‌ ಡಾಲರ್‌ ಆರ್ಥಿಕ ನೆರವು ದೊರೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2019ರ ಡಿಸೆಂಬರ್‌ 31

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಮಾಹಿತಿಗೆ: http://www.b4s.in/praja/NRD1

***

ಮೆಲ್ಬರ್ನ್‌ ವಿಶ್ವವಿದ್ಯಾಲಯದ ವಿಜ್ಞಾನ ಸ್ನಾತಕೋತ್ತರ ಲೇಖನ ಪ್ರಶಸ್ತಿ– 2019

ವಿವರ: ವಿಜ್ಞಾನ ವಿಷಯದಲ್ಲಿ ಪಿಎಚ್‌.ಡಿ. ಪ್ರಬಂಧ ಸಲ್ಲಿಕೆ ಮಾಡಿರುವ ಸಂಶೋಧನಾರ್ಥಿಗಳಿಗೆ ಈ ವಿದ್ಯಾರ್ಥಿವೇತನ ನೀಡಲಾಗುತ್ತದೆ. 

ಅರ್ಹತೆ: ಮೂರು ವರ್ಷ 10 ತಿಂಗಳ ಅವಧಿಯಲ್ಲಿ ಪಿಎಚ್‌.ಡಿ. ಪ್ರಬಂಧ ಸಲ್ಲಿಸಿ, ಫಲಿತಾಂಶದ ನಿರೀಕ್ಷೆಯಲ್ಲಿರುವ ಸಂಶೋಧನಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಆರ್ಥಿಕ ನೆರವು: ಆಯ್ಕೆಯಾಗುವ ಅಭ್ಯರ್ಥಿಗಳಿಗೆ 5000 ಆಸ್ಟ್ರೇಲಿಯನ್‌ ಡಾಲರ್‌ ಆರ್ಥಿಕ ನೆರವು ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಕೊನೆಯ ದಿನ: 2019ರ ಡಿಸೆಂಬರ್‌ 31

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಮಾಹಿತಿಗೆ: http://www.b4s.in/praja/FSP1

***

ಇಂಗ್ಲಿಷ್‌ ಪರಿಣತಿ ಸಂಬಂಧ ನೀಡುವ ಎಸ್‌ಒಎಫ್‌ ವಿದ್ಯಾರ್ಥಿವೇತನ– 2020

ವಿವರ: 1ರಿಂದ 10ನೇ ತರಗತಿವರೆಗೆ ಓದುತ್ತಿರುವ ಹಾಗೂ ಹಿಂದಿನ ವಾರ್ಷಿಕ ಪರೀಕ್ಷೆಯಲ್ಲಿ ಇಂಗ್ಲಿಷ್‌ ವಿಷಯದಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ‘ಸೈನ್ಸ್‌ ಒಲಂಪಿಯಾಡ್‌ ಫೌಂಡೇಷನ್‌’ ಮತ್ತು ‘ಬ್ರಿಟಿಷ್‌ ಕೌನ್ಸಿಲ್‌’ ಈ ವಿದ್ಯಾರ್ಥಿವೇತನ ನೀಡುತ್ತದೆ.

ಅರ್ಹತೆ: ಆಯ್ದ 120 ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ಹಿಂದಿನ ವಾರ್ಷಿಕ ಪರೀಕ್ಷೆಯಲ್ಲಿ ಸರಾಸರಿ ಶೇ 85ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿಬೇಕು ಹಾಗೂ ಇಂಗ್ಲಿಷ್‌ ವಿಷಯದಲ್ಲಿ ಶೇ 90 ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು.

ಆರ್ಥಿಕ ನೆರವು: ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ₹5000 ಆರ್ಥಿಕ ನೆರವು ಹಾಗೂ ಪ್ರಮಾಣ ಪತ್ರ ದೊರೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2019ರ ಡಿಸೆಂಬರ್‌ 31

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಮಾಹಿತಿಗೆ: http://www.b4s.in/praja/SOF1

ಕೃಪೆ: buddy4study.com

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು