ಗುರುವಾರ , ಜುಲೈ 16, 2020
22 °C
ದ್ವಿತೀಯ ಪಿಯು ಇಂಗ್ಲಿಷ್ ಉತ್ತರ ಪತ್ರಿಕೆ ಮೌಲ್ಯಮಾಪನ ಜಿಲ್ಲೆಗಳಲ್ಲಿ

ನಿಗದಿಯಂತೆಯೇ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸುರೇಶ್‌ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ತಕರಾರು ಅರ್ಜಿಯನ್ನು ಇತ್ಯರ್ಥಪಡಿಸಿರುವುದರಿಂದ ಇದೀಗ ಪರೀಕ್ಷೆ ನಡೆಸಲು ಯಾವುದೇ ಅಡ್ಡಿ ಇಲ್ಲ. ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಯಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‍ ಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪರೀಕ್ಷೆ ನಡೆಸುವುದರಲ್ಲಿ ಯಾವುದೇ ವಿವಾದವಿಲ್ಲ. ಕೆಲವರು ಉದ್ದೇಶಪೂರ್ವಕವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ. ಪರೀಕ್ಷೆ ನಡೆಸದೆ ರಾಜ್ಯದ 8.5 ಲಕ್ಷ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲು ಸಾಧ್ಯವಿಲ್ಲ, ಹೀಗಾಗಿ ಪರೀಕ್ಷೆ ಅನಿವಾರ್ಯ’ ಎಂದರು.

ಈ ಮಧ್ಯೆ ಸಚಿವರು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆದಿದ್ದು, ಎಸ್ಸೆಸ್ಸೆಲ್ಲಿ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹಿತದೃಷ್ಟಿಯಿಂದ ಸುರಕ್ಷಿತವಾಗಿ ಮತ್ತು ಯಶಸ್ವಿಯಾಗಿ ಮಾಡಿ ಮುಗಿಸಲು ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.

ಪಿಯು ಮೌಲ್ಯಮಾಪನ: ದ್ವಿತೀಯ ಪಿಯು ಇಂಗ್ಲಿಷ್‌ ಪತ್ರಿಕೆಯ ಪರೀಕ್ಷೆ ಜೂನ್‌ 18ರಂದು ನಡೆಯಲಿದ್ದು, ಅದರ ಮೌಲ್ಯಮಾಪನವನ್ನು ಆಯಾ ಜಿಲ್ಲೆಗಳಲ್ಲೇ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು