ಇಂದಿನಿಂದ ‘ಜ್ಞಾನದೇಗುಲ’ ಶೈಕ್ಷಣಿಕ ಮೇಳ

ಮಂಗಳವಾರ, ಜೂನ್ 18, 2019
31 °C

ಇಂದಿನಿಂದ ‘ಜ್ಞಾನದೇಗುಲ’ ಶೈಕ್ಷಣಿಕ ಮೇಳ

Published:
Updated:
Prajavani

ಬೆಂಗಳೂರು: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಸಹಯೋಗದಲ್ಲಿ ಮೇ 25 ಮತ್ತು 26ರಂದು 11ನೇ ಆವೃತ್ತಿಯ ‘ಎಡ್ಯುವರ್ಸ್‌: ಜ್ಞಾನ ದೇಗುಲ’ ಶೈಕ್ಷಣಿಕ ಮೇಳ ಆಯೋಜಿಸಲಾಗಿದೆ.

ಶಿಕ್ಷಣ ತಜ್ಞರ ಸಾರಥ್ಯದಲ್ಲಿ ನಡೆಯಲಿರುವ ಈ ಬೃಹತ್‌ ಮೇಳದಲ್ಲಿ ವಿದ್ಯಾರ್ಥಿಗಳು ಕೋರ್ಸ್‌ಗಳನ್ನು ಆಯ್ದುಕೊಂಡು ಶೈಕ್ಷಣಿಕ ಭವಿಷ್ಯ ರೂಪಿಸಿಕೊಳ್ಳಲು ಸೂಕ್ತ ಮಾರ್ಗದರ್ಶನ ಸಿಗಲಿದೆ. ಶಿಕ್ಷಣ ಸಾಲ ಯೋಜನೆಯ ಜತೆಗೆ ವಿಶೇಷ ಕೋರ್ಸ್‌ಗಳ ಮಾಹಿತಿಯೂ ಇಲ್ಲಿ ಇರಲಿದೆ. 

ದೇಶದ ಹೆಸರಾಂತ ವಿಶ್ವವಿದ್ಯಾಲಯಗಳು, ಕಾಲೇಜುಗಳ ಮಳಿಗೆಗಳು ಮೇಳದಲ್ಲಿ ಇರಲಿವೆ. ಇಲ್ಲಿ ಕಾಲೇಜಿನಲ್ಲಿನ ಕೋರ್ಸ್‌ಗಳ ಮಾಹಿತಿ, ಶುಲ್ಕ ವಿವರ, ಕೋರ್ಸ್‌ ಅಧ್ಯಯನದಿಂದ ಭವಿಷ್ಯದಲ್ಲಿ ಸಿಗುವ ಉದ್ಯೋಗ ಅವಕಾಶಗಳ ಕುರಿತು ಮಾಹಿತಿ ಲಭ್ಯ ಇರಲಿದೆ.

ಸಿಇಟಿ ಮತ್ತು ಕಾಮೆಡ್‌–ಕೆ ತಂಡದಿಂದ ಉಚಿತ ಕೌನ್ಸೆಲಿಂಗ್‌ ಸಹ ಇರಲಿವೆ. ಶಿಕ್ಷಣ ತಜ್ಞರು ಶೈಕ್ಷಣಿಕ ರಂಗದಲ್ಲಿನ ಬೆಳವಣಿಗೆಗಳಿಗೆ ಹೊಂದಿಕೊಳ್ಳುವ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಸಹ ನಡೆಸಲಿದ್ದಾರೆ.

ಸಿಎಂಆರ್‌, ಗಾರ್ಡನ್‌ ಸಿಟಿ, ಗೀತಮ್‌, ಕೆಎಲ್‌ಇ, ಪ್ರೆಸಿಡೆನ್ಸಿ, ರೇವಾ, ಎಂ.ಎಸ್‌.ರಾಮಯ್ಯ, ದಯಾನಂದ ಸಾಗರ್‌, ಅಲಯನ್ಸ್‌ ವಿಶ್ವವಿದ್ಯಾಲಯಗಳ ಮಳಿಗೆಗಳು ಮೇಳದಲ್ಲಿ ಇರಲಿವೆ. ಆಚಾರ್ಯ, ಕೇಂಬ್ರಿಜ್‌, ಈಸ್ಟ್‌ ಪಾಯಿಂಟ್‌, ಎಚ್‌ಕೆಬಿಕೆ, ಸಂಭ್ರಮ್‌, ಯುನಿವರ್ಸಲ್‌ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಸಹ ಮಾಹಿತಿ ನೀಡಲಿದ್ದಾರೆ.

ಸ್ಥಳ: ಜಯಮಹಲ್‌, ಅರಮನೆ ಮೈದಾನ

ಸಮಯ: ಬೆಳಿಗ್ಗೆ 9.30 ರಿಂದ ಸಂಜೆ 5.30

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !