ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ ಜಾಗೃತಿಗೆ ಬೈಕ್ ಚಲಾಯಿಸಿದ ಜಿ.ಪಂ ಸಿಇಒ

Published 23 ಏಪ್ರಿಲ್ 2024, 4:33 IST
Last Updated 23 ಏಪ್ರಿಲ್ 2024, 4:33 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ದೊಡ್ಡಬಳ್ಳಾಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ತಾಲ್ಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿಗಾಗಿ ಸೋಮವಾರ ಬೈಕ್ ರ‍್ಯಾಲಿ ನಡೆಯಿತು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ, ಜಿ.ಪಂ ಸಿಇಒ ಡಾ.ಕೆ.ಎನ್.ಅನುರಾಧ ಬೈಕ್‌ ಚಲಾಯಿಸುವ ಮೂಲಕ ರ‍್ಯಾಲಿಗೆ ಉತ್ಸಾಹ ತುಂಬಿದರು.

ಅರಳುಮಲ್ಲಿಗೆ ಗ್ರಾಮ ಪಂಚಾಯಿತಿಯಿಂದ ದರ್ಗಾಜೋಗಿಹಳ್ಳಿ, ನಗರಸಭೆ ವ್ಯಾಪ್ತಿಯ ಕೆಲ ವಾರ್ಡ್‍ಗಳು, ಕೊಡಿಗೆಹಳ್ಳಿ, ಕಂಟನಕುಂಟೆ ಗ್ರಾಮ ಪಂಚಾಯಿತಿಯವರೆಗೆ ಬೈಕ್ ಜಾಥಾ ಸಂಚರಿಸಿ ಮತದಾನದ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲಾಯಿತು.

ಜಾಥಾದಲ್ಲಿ ತಾಲ್ಲೂಕಿನ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಸಿಬ್ಬಂದಿ ಗ್ರಾಮ ಪಂಚಾಯಿತಿ ಸಿಬ್ಬಂದಿ, ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳು ಸೇರಿ 500ಕ್ಕೂ ಹೆಚ್ಚು ಬೈಕ್‍ಗಳು ಸಂಚರಿಸಿದವು.

ಇದೇ ವೇಳೆ ಮತದಾನದ ಪ್ರತಿಜ್ಞಾನ ವಿಧಿ ಬೋಧಿಸಲಾಯಿತು.

ಜಾಥಾಕ್ಕೆ ಚಾಲನೆ ನೀಡಿದ ಜಿ.ಪಂ ಸಿಇಒ ಡಾ.ಕೆ.ಎನ್.ಅನುರಾಧ ಮಾತನಾಡಿ, ಸದೃಢ ದೇಶ ನಿರ್ಮಾಣಕ್ಕೆ ಮತದಾನ ಅವಶ್ಯಕವಾಗಿದೆ. ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬರು ಮತ ಚಲಾಯಿಸಬೇಕು ಎಂದು ಹೇಳಿದರು.

ಬೈಕ್‌ ರ‍್ಯಾಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು, ನಗರಸಭೆ ಪೌರಯುಕ್ತ ಕೆ.ಪರಮೇಶ್, ಯೋಜನಾ ನಿರ್ದೇಶಕ ವಿಟ್ಟಲ್ ಕಾವಳೆ, ಸಿಎಓ ಶ್ರೀನಿವಾಸ್, ಸಿಪಿಒ ರಾಮಕೃಷ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT