ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರ ಪರಿಚಯ: ಪಶ್ಚಿಮ ಬಂಗಾಳದ ದಾರ್ಜಿಲಿಂಗ್‌

Published 24 ಏಪ್ರಿಲ್ 2024, 19:30 IST
Last Updated 24 ಏಪ್ರಿಲ್ 2024, 19:30 IST
ಅಕ್ಷರ ಗಾತ್ರ

ಪಶ್ಚಿಮ ಬಂಗಾಳದ ಪ್ರತಿಷ್ಠಿತ ಕ್ಷೇತ್ರಗಳಲ್ಲೊಂದಾದ ದಾರ್ಜಿಲಿಂಗ್‌ ಲೋಕಸಭಾ ಕ್ಷೇತ್ರವು ಈ ಬಾರಿ ತ್ರಿಕೋನ ಸ್ಪರ್ಧೆಗೆ ಅಣಿಯಾಗಿದೆ.

ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಪಕ್ಷವು ಗೋಪಾಲ್‌ ಲಾಮಾ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿಯು ಕಳೆದ ಬಾರಿ ಇಲ್ಲಿಂದ ಗೆದ್ದಿದ್ದ ರಾಜು ಬಿಸ್ತಾ ಅವರನ್ನು ಪ್ರತಿಸ್ಪರ್ಧಿಯಾಗಿಸಿದೆ‌. ಕಾಂಗ್ರೆಸ್‌, ಮುನೀಷ್‌ ತಮಾಂಗ್‌ ಅವರನ್ನು ಅಖಾಡಕ್ಕಿಳಿಸಿದೆ.

ಮುನೀಷ್‌ ಅವರಿಗೆ ಟಿಕೆಟ್‌ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಕಾಂಗ್ರೆಸ್‌ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಗೋರ್ಖಾ ಮುಖಂಡ ಬಿನೋಯ್‌ ತಮಾಂಗ್ ಅವರು ಬಿಜೆಪಿ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದರು. ಬಳಿಕ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ರಾಜು ಬಿಸ್ತಾ ಅವರು ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿಯೂ ಕಾರ್ಯನಿರ್ವಹಿಸಿದವರು. 2019ರ ಚುನಾವಣೆಯಲ್ಲಿ ಇವರು 4,13,443 ಮತಗಳ ಅಂತರದಿಂದ ತೃಣಮೂಲ ಕಾಂಗ್ರೆಸ್‌ನ ಅಮರ್‌ ಸಿಂಗ್‌ ರಾಯ್‌ ಅವರನ್ನು ಪರಾಭವಗೊಳಿಸಿದ್ದರು.

2009 ರಿಂದಲೂ ಈ ಕ್ಷೇತ್ರ ಬಿಜೆಪಿಯ ಹಿಡಿತದಲ್ಲಿದೆ. ಭಾರತೀಯ ಗೋರ್ಖಾ ಪರಿಸಂಘ್‌ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಮುನೀಷ್‌ ಅವರು, ಸ್ಥಳೀಯವಾಗಿಯೂ ಪ್ರಭಾವಿ ಮುಖಂಡರಾಗಿದ್ದಾರೆ. ಇವರು ಈಚೆಗೆ ಕಾಂಗ್ರೆಸ್‌ ಸೇರಿದ್ದರು. ಗೋಪಾಲ್‌ ಲಾಮಾ ಅವರು, ದಾರ್ಜಿಲಿಂಗ್‌ನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿ ಬಳಿಕ ರಾಜಕೀಯ ಕ್ಷೇತ್ರಕ್ಕೆ ಕಾಲಿರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT