ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರ ಮಹಾತ್ಮೆ: ನಾಸಿಕ್‌ (ಮಹಾರಾಷ್ಟ್ರ)

Published 7 ಮೇ 2024, 23:37 IST
Last Updated 7 ಮೇ 2024, 23:37 IST
ಅಕ್ಷರ ಗಾತ್ರ

ಮಹಾರಾಷ್ಟ್ರದ ನಾಸಿಕ್‌ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಘಟಾನುಘಟಿಗಳ ಸೆಣಸಾಟಕ್ಕೆ ವೇದಿಕೆ ಸಿದ್ಧವಾಗಿದೆ. ಕಳೆದ ಚುನಾವಣೆಯಲ್ಲಿ ಶಿವಸೇನಾದಿಂದ ಗೆದ್ದಿದ್ದ ಹೇಮಂತ್‌ ಗೋಡ್ಸೆ ಅವರನ್ನು ಶಿವಸೇನಾ ಏಕನಾಥ ಶಿಂದೆ ಬಣವು ಈ ಬಾರಿ ಕಣಕ್ಕಿಳಿಸಿದೆ. ಶಿವಸೇನಾ ಉದ್ಧವ್‌ ಠಾಕ್ರೆ ಬಣವು ರಾಜಭಾವು ವಾಜೆ ಅವರನ್ನು ಅಖಾಡಕ್ಕಿಳಿಸಿದೆ. ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್‌ ಅವರ ವಂಚಿತ್‌ ಬಹುಜನ ಆಘಾಡಿ (ವಿಬಿಎ) ಪಕ್ಷವು ಕರಣ್‌ ಗಾಯ್ಕರ್‌ ಅವರನ್ನು ಸ್ಪರ್ಧಿಯಾಗಿಸಿದೆ. ಧಾರ್ಮಿಕ ಮುಖಂಡ ಶಾಂತಿಗಿರಿ ಮಹಾರಾಜ್‌ ಅವರು ಪಕ್ಷೇತರರಾಗಿ ಕಣದಲ್ಲಿದ್ದಾರೆ. 2019ರ ಚುನಾವಣೆಯಲ್ಲಿ ಹೇಮಂತ್‌ ಅವರು 2,92,204 ಮತಗಳ ಅಂತರದಿಂದ ಎನ್‌ಸಿಪಿಯ ಸಮೀರ್‌ ಭುಜಬಲ್‌ ಅವರನ್ನು ಪರಾಭವಗೊಳಿಸಿದ್ದರು. ಶಾಂತಿಗಿರಿ ಮಹಾರಾಜ್‌ ಸ್ಪರ್ಧಿಸುತ್ತಿರುವುದು ‘ಮಹಾಯುತಿ’ ಒಕ್ಕೂಟಕ್ಕೆ ತಲೆನೋವಾಗಿ ಪರಿಣಮಿಸಿದೆ. ಹಿಂದುತ್ವ ಪರ ಮತಗಳು ವಿಭಜನೆಯಾಗುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ. ಶಾಂತಿಗಿರಿ ಅವರ ಮನವೊಲಿಸಿ ಸ್ಪರ್ಧಾ ಕಣದಿಂದ ಹಿಂದೆ ಸರಿಸಲು ಬಿಜೆಪಿಯ ಹಿರಿಯ ನಾಯಕರು ಸಾಕಷ್ಟು ಶ್ರಮಪಟ್ಟಿದ್ದರು. ಆದರೆ ಅವರು ಒಪ್ಪಿಲ್ಲ. ಶಿವಸೇನಾ ಉದ್ಧವ್‌ ಠಾಕ್ರೆ ಬಣವು ‘ಇಂಡಿಯಾ’ ಒಕ್ಕೂಟದಲ್ಲಿರುವುದರಿಂದ ರಾಜಭಾವು ಅವರು ಗೆಲ್ಲಬಹುದೆಂಬ ವಿಶ್ವಾಸ ಆ ಒಕ್ಕೂಟದ ಮುಖಂಡರದ್ದಾಗಿದೆ. ವಿಬಿಎ ಅಭ್ಯರ್ಥಿ ಕಣದಲ್ಲಿರುವುದರಿಂದ ಬಿಜೆಪಿ ವಿರೋಧಿ ಮತಗಳು ವಿಭಜನೆಯಾಗುವ ಸಾಧ್ಯತೆಯಿದೆ ಎಂಬುದು ಚುನಾವಣಾ ವಿಶ್ಲೇಷಕರ ಅಭಿಪ್ರಾಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT