ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ ಲೋಕಸಭಾ ಕ್ಷೇತ್ರ: ಅಭ್ಯರ್ಥಿಗಳಿಗೆ ತಲೆನೋವಾದ ಆಂತರಿಕ ಬೇಗುದಿ

ಬಿಜೆಪಿ, ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾದರೂ ನಿಲ್ಲದ ಕಲಹ, ಗೊಂದಲದಲ್ಲಿ ಬೆಂಬಲಿಗರು
Published 29 ಮಾರ್ಚ್ 2024, 5:35 IST
Last Updated 29 ಮಾರ್ಚ್ 2024, 5:35 IST
ಅಕ್ಷರ ಗಾತ್ರ

ಕೊಪ್ಪಳ: ಸತತ ಎರಡನೇ ಬಾರಿಗೆ ಲೋಕಸಭಾ ಚುನಾವಣೆಯ ಸವಾಲು ಎದುರಿಸುತ್ತಿರುವ ಕಾಂಗ್ರೆಸ್‌ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಆದಿಯಾಗಿ ಹಲವು ನಾಯಕರಿಗೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಆಂತರಿಕ ಕಲಹ ಕಗ್ಗಂಟಾಗಿದೆ.

ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಆ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಸೋಲಿನ ಬಳಿಕವಂತೂ ಬೇಗುದಿ ಹೆಚ್ಚಾಗಿದೆ. ಕೆಲವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪರವಾಗಿ ಕೆಲಸ ಮಾಡಿದ್ದಾರೆ ಎನ್ನುವುದೇ ಅನ್ಸಾರಿ ಅಸಮಾಧಾನಕ್ಕೆ ಕಾರಣ. ಅವರನ್ನು ಪಕ್ಷಕ್ಕೆ ಮರಳಿ ಸೇರ್ಪಡೆ ಮಾಡಿಕೊಂಡು ಕಾಂಗ್ರೆಸ್‌ ಸಭೆ, ಸಮಾರಂಭಗಳನ್ನು ನಡೆಸಲು ಅವಕಾಶ ಕೊಟ್ಟಿದ್ದಾರೆ ಎನ್ನುವುದು ಅನ್ಸಾರಿ ಆರೋಪ.

ಟಿಕೆಟ್ ಘೋಷಣೆಯಾದ ಬಳಿಕ ಪಕ್ಷದ ಜಿಲ್ಲಾಧ್ಯಕ್ಷರೂ ಆದ ಸಚಿವ ಶಿವರಾಜ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ, ರಾಜಶೇಖರ ಹಿಟ್ನಾಳ ಅವರು ಮನವೊಲಿಸಲು ಅನ್ಸಾರಿ ಮನೆಗೆ ತೆರಳಿದ್ದರು. ಆಗಲೂ ಅವರು ತಮ್ಮ ಅಸಮಾಧಾನ ಹೇಳಿಕೊಂಡಿದ್ದರು.

ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಓಡಾಡಿ ರಾಜಶೇಖರ ಅವರು ಪ್ರಚಾರ ಮಾಡುತ್ತಿದ್ದಾರೆ. ಆದರೆ ಗಂಗಾವತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಗೆ ಅನ್ಸಾರಿ ಬೆಂಬಲ ಸಿಗುತ್ತಿಲ್ಲ. ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮನೆಯ ಎರಡು ಬಾಗಿಲು ಆಗಿದ್ದು ಒಂದೆಡೆ ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌. ಶ್ರೀನಾಥ್‌ ಹಾಗೂ ಮಲ್ಲಿಕಾರ್ಜುನ ನಾಗಪ್ಪ ವಣ ಬಳ್ಳಾರಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅನ್ಸಾರಿ ಅಂತರ ಕಾಯ್ದುಕೊಂಡಿದ್ದರು.

ಸಂಗಣ್ಣ ನಡೆ ನಿಗೂಢ

ಕೊಪ್ಪಳ: ಸತತ ಎರಡು ಬಾರಿ ಬಿಜೆಪಿಯಿಂದ ಸಂಸದರಾಗಿರುವ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಮುನಿಸಿಕೊಂಡಿರುವ ಅವರು ಪಕ್ಷದ ಯಾವ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳುತ್ತಿಲ್ಲ.

ಡಾ. ಬಸವರಾಜ ಕ್ಯಾವಟರ್‌ ಅವರಿಗೆ ಟಿಕೆಟ್ ಘೋಷಣೆಯಾದ ದಿನದಿಂದಲೂ ಅವರು ಪಕ್ಷದೊಂದಿಗೆ ಅಂತರ ಕಾಯ್ದುಕೊಂಡಿದ್ದಾರೆ. ’ನಾನು ಪಕ್ಷ ಬಿಡುವುದಿಲ್ಲ. ಪ್ರಚಾರದ ನಾಯಕತ್ವವನ್ನೂ ವಹಿಸುವುದಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿರುತ್ತೇನೆ’ ಎಂದು ಸಂಗಣ್ಣ ಹೇಳಿಕೆ ನೀಡಿದ್ದಾರೆ. ವರಿಷ್ಠರೊಂದಿಗೆ ಚರ್ಚೆಗೆ ಬೆಂಗಳೂರಿಗೆ ತೆರಳಿದ್ದ ಅವರು ಅಲ್ಲಿಯೇ ಹಲವು ನಾಯಕರನ್ನು ಭೇಟಿಯಾಗಿದ್ದಾರೆ.

ಇದು ಸ್ಥಳೀಯವಾಗಿ ಅವರ ಬೆಂಬಲಿಗರ ಗೊಂದಲಕ್ಕೆ ಕಾರಣವಾಗಿದೆ. ಹಲವರು ಸಂಗಣ್ಣ ಕರಡಿ ಅವರ ಬೆಂಬಲಿಗರಾಗಿ ಹಾಗೂ ಪಕ್ಷದ ಕಾರ್ಯಕರ್ತರಾಗಿಯೂ ಇದ್ದಾರೆ. ಅವರಿಗೆ ಸಂಗಣ್ಣ ಅವರ ಹಿಂದೆ ಹೋಗಬೇಕೋ? ಪಕ್ಷದ ಪ್ರಚಾರ, ಸಿದ್ಧತೆ ಹಾಗೂ ಸಭೆಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕೊ ಎನ್ನುವ ಗೊಂದಲ ಕಾಡುತ್ತಿದೆ. ಹೀಗಾಗಿ ಕೆಲವರು ತಟಸ್ಥರಾಗಿ ಉಳಿದುಕೊಂಡಿದ್ದಾರೆ. ಇನ್ನೂ ಕೆಲವರು ಸಂಗಣ್ಣ ಅವರ ಮುಂದಿನ ನಡೆ ಏನು ಎನ್ನುವುದನ್ನು ಎದುರು ನೋಡುತ್ತಿದ್ದರೆ, ಇನ್ನೂ ಕೆಲವರು ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಅನೇಕ ವರ್ಷಗಳಿಂದ ಸಕ್ರಿಯ ರಾಜಕಾರಣದಲ್ಲಿರುವ ಸಂಗಣ್ಣ ಅವರನ್ನು ಮುಂದಿಟ್ಟುಕೊಂಡೇ ಚುನಾವಣೆ ಎದುರಿಸಲಾಗುವುದು ಎನ್ನುವುದು ಅಭ್ಯರ್ಥಿ ಬಸವರಾಜ ಹಾಗೂ ಪಕ್ಷದ ಪ್ರಮುಖರ ಆಶಯ. ಇದನ್ನು ಅನೇಕರು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಸಂಗಣ್ಣ ಅವರ ತಟಸ್ಥ ನೀತಿ ಬಿಜೆಪಿಯಲ್ಲಿ ಆಂತರಿಕ ಬೇಗುದಿಗೂ ಕಾರಣವಾಗಿದೆ.

ಸಿಎಂಗೆ ವರದಿ ಒಪ್ಪಿಸಿದ ಅನ್ಸಾರಿ

ಕೊಪ್ಪಳ: ಸತತ ಎರಡನೇ ಬಾರಿಗೆ ಲೋಕಸಭಾ ಚುನಾವಣೆಯ ಸವಾಲು ಎದುರಿಸುತ್ತಿರುವ ಕಾಂಗ್ರೆಸ್‌ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಆದಿಯಾಗಿ ಹಲವು ನಾಯಕರಿಗೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಆಂತರಿಕ ಕಲಹ ಕಗ್ಗಂಟಾಗಿದೆ.

ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಆ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಸೋಲಿನ ಬಳಿಕವಂತೂ ಬೇಗುದಿ ಹೆಚ್ಚಾಗಿದೆ. ಕೆಲವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪರವಾಗಿ ಕೆಲಸ ಮಾಡಿದ್ದಾರೆ ಎನ್ನುವುದೇ ಅನ್ಸಾರಿ ಅಸಮಾಧಾನಕ್ಕೆ ಕಾರಣ. ಅವರನ್ನು ಪಕ್ಷಕ್ಕೆ ಮರಳಿ ಸೇರ್ಪಡೆ ಮಾಡಿಕೊಂಡು ಕಾಂಗ್ರೆಸ್‌ ಸಭೆ, ಸಮಾರಂಭಗಳನ್ನು ನಡೆಸಲು ಅವಕಾಶ ಕೊಟ್ಟಿದ್ದಾರೆ ಎನ್ನುವುದು ಅನ್ಸಾರಿ ಆರೋಪ.

ಟಿಕೆಟ್ ಘೋಷಣೆಯಾದ ಬಳಿಕ ಪಕ್ಷದ ಜಿಲ್ಲಾಧ್ಯಕ್ಷರೂ ಆದ ಸಚಿವ ಶಿವರಾಜ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ, ರಾಜಶೇಖರ ಹಿಟ್ನಾಳ ಅವರು ಮನವೊಲಿಸಲು ಅನ್ಸಾರಿ ಮನೆಗೆ ತೆರಳಿದ್ದರು. ಆಗಲೂ ಅವರು ತಮ್ಮ ಅಸಮಾಧಾನ ಹೇಳಿಕೊಂಡಿದ್ದರು.

ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಓಡಾಡಿ ರಾಜಶೇಖರ ಅವರು ಪ್ರಚಾರ ಮಾಡುತ್ತಿದ್ದಾರೆ. ಆದರೆ ಗಂಗಾವತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಗೆ ಅನ್ಸಾರಿ ಬೆಂಬಲ ಸಿಗುತ್ತಿಲ್ಲ. ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮನೆಯ ಎರಡು ಬಾಗಿಲು ಆಗಿದ್ದು ಒಂದೆಡೆ ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌. ಶ್ರೀನಾಥ್‌ ಹಾಗೂ ಮಲ್ಲಿಕಾರ್ಜುನ ನಾಗಪ್ಪ ವಣ ಬಳ್ಳಾರಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅನ್ಸಾರಿ ಅಂತರ ಕಾಯ್ದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT