ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರ ಮಹಾತ್ಮೆ | ಒಡಿಶಾದ ಸಂಬಲ್‌ಪುರ

Published 30 ಮಾರ್ಚ್ 2024, 21:12 IST
Last Updated 30 ಮಾರ್ಚ್ 2024, 21:12 IST
ಅಕ್ಷರ ಗಾತ್ರ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು 15 ವರ್ಷಗಳ ಅಂತರದ ಬಳಿಕ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಒಡಿಶಾದ ಪ್ರತಿಷ್ಠಿತ ಕ್ಷೇತ್ರಗಳಲ್ಲೊಂದಾದ ಸಂಬಲ್‌ಪುರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಹಿಂದೆ ಅವರು ರಾಜ್ಯಸಭಾ ಸದಸ್ಯರಾಗಿ ಸಂಸತ್‌ ಪ್ರವೇಶಿಸಿದ್ದರು. 2019ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ನಿತೇಶ್ ಗಂಗಾ ದೇವ್‌ ಅವರು 4,73,770 ಮತಗಳನ್ನು ಪಡೆದು ಗೆದ್ದಿರುವುದರಿಂದ ಬಿಜೆಪಿ ಈ ಬಾರಿಯೂ ಗೆಲುವಿನ ನಿರೀಕ್ಷೆಯಲ್ಲಿದೆ. ಕಳೆದ ಬಾರಿ ಬಿಜು ಜನತಾ ದಳ (ಬಿಜೆಡಿ) ಅಭ್ಯರ್ಥಿ ನಳಿನಿ ಕಾಂತ ಪ್ರಧಾನ್ ಅವರು ತೀವ್ರ ಪೈಪೋಟಿ ನೀಡಿ ಎರಡನೇ ಸ್ಥಾನಕ್ಕೆ ಪಡೆದಿದ್ದರು. ಬಿಜೆಪಿ ಅಭ್ಯರ್ಥಿ ಕಡಿಮೆ ಅಂತರದಿಂದ ಗೆದ್ದಿದ್ದರು. ಈ ಬಾರಿ ಪ್ರಬಲ ಸ್ಪರ್ಧೆ ನೀಡಲು ಬಿಜೆಡಿಯು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಪ್ರಣವ್‌ ಪ್ರಕಾಶ್‌ ದಾಸ್‌ ಅವರನ್ನು ಅಖಾಡಕ್ಕಿಳಿಸಿದೆ. ಪಕ್ಷದ ಮುಖ್ಯಸ್ಥ ನವೀನ್‌ ಪಟ್ನಾಯಕ್‌ ಅವರ ನಂತರದ ಪ್ರಭಾವಿ ನಾಯಕರಲ್ಲಿ ಪ್ರಣವ್‌ ಅವರೂ ಒಬ್ಬರು. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅನುಭವ ಅವರಿಗಿದೆ. ಈ ಕಾರಣಕ್ಕೆ ಸ್ಪರ್ಧೆಯು ನೇರ ಹಣಾಹಣಿಗೆ ಸಾಕ್ಷಿಯಾಗಲಿದೆ. ಆಡಳಿತಾರೂಢ ಪಕ್ಷದ ಪ್ರಭಾವ ಮತ್ತು ಪ್ರಬಲ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸಿರುವುದರಿಂದ ಬಿಜೆಡಿ ಕೂಡ ಗೆಲುವಿನ ವಿಶ್ವಾಸದಲ್ಲಿದೆ. 2009ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಮರನಾಥ್‌ ಪ್ರಧಾನ್‌ ಜಯಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT