ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ಷೇತ್ರ ಮಹಾತ್ಮೆ: ಕೊರಾಪುಟ್‌ (ಒಡಿಶಾ)

Published 10 ಮೇ 2024, 23:58 IST
Last Updated 10 ಮೇ 2024, 23:58 IST
ಅಕ್ಷರ ಗಾತ್ರ

ಒಡಿಶಾದ ಕಾಶ್ಮೀರ ಎಂದೇ ಪ್ರಸಿದ್ಧವಾಗಿರುವ ಗುಡ್ಡಗಾಡು ಪ್ರದೇಶಗಳನ್ನು ಹೊಂದಿರುವ ಕೊರಾಪುಟ್‌ ಲೋಕಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆಗೆ ಕಣ ಸಜ್ಜಾಗಿದೆ. ಆಡಳಿತಾರೂಢ ಬಿಜು ಜನತಾ ದಳವು (ಬಿಜೆಡಿ) ಕೌಶಲ್ಯ ಹಿಕಾಕ ಅವರನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್‌ ಪಕ್ಷವು ಸಪ್ತಗಿರಿ ಉಲಕ ಅವರನ್ನು ಅಖಾಡಕ್ಕಿಳಿಸಿದೆ. ಇವರಿಬ್ಬರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯು ಕಲಿರಾಮ್‌ ಮಾಝಿ ಅವರನ್ನು ಸ್ಪರ್ಧೆಗಿಳಿಸಿದೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಪ್ತಗಿರಿ ಅವರು ಕೇವಲ 3,613 ಮತಗಳ ಅಂತರದಿಂದ ಕೌಶಲ್ಯ ಅವರನ್ನು ಪರಾಭವಗೊಳಿಸಿದ್ದರು. ಬುಡಕಟ್ಟು ಜನರ ಪ್ರಾಬಲ್ಯವಿರುವ ಈ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ, ರೈತರ ಸಮಸ್ಯೆಗಳೇ ಪ್ರಮುಖ ಚರ್ಚಾ ವಿಷಯವಾಗಿವೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಕೌಶಲ್ಯ ಅವರು ಆಡಳಿತಾರೂಢ ಸರ್ಕಾರದ ಸಾಧನೆಗಳನ್ನು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಜನರ ಬಳಿಗೆ ತೆರಳುತ್ತಿದ್ದಾರೆ. ರಾಮಮಂದಿರ ನಿರ್ಮಾಣ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಪ್ರಮುಖ ನಿರ್ಧಾರಗಳನ್ನು ಪ್ರಮುಖ ಚುನಾವಣಾ ವಿಚಾರವಾಗಿಸಿ ಬಿಜೆಪಿ ಅಭ್ಯರ್ಥಿ ಮತಯಾಚಿಸುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ಭರವಸೆಯನ್ನೂ ನೀಡುತ್ತಿದ್ದಾರೆ. ಬಿಜೆಡಿಯ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನು ಮರಳಿ ಪಕ್ಷದ ತೆಕ್ಕೆಗೆ ಪಡೆಯಲು ಆಡಳಿತಾರೂಢ ಪಕ್ಷದ ಮುಖಂಡರು ಅವಿರತವಾಗಿ ಶ್ರಮಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT