ಬುಡಕಟ್ಟು ಸಮುದಾಯಗಳ ಪ್ರಾಬಲ್ಯವಿರುವ ದಕ್ಷಿಣ ಒಡಿಶಾದ ನವರಂಗಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದ್ದು, ಪ್ರಬಲ ಅಬ್ಯರ್ಥಿಗಳು ಹಣಾಹಣಿಗೆ ಸಿದ್ಧರಾಗಿದ್ದಾರೆ. ಆಡಳಿತಾರೂಢ ಬಿಜು ಜನತಾ ದಳವು (ಬಿಜೆಡಿ) ಪ್ರದೀಪ್ ಕುಮಾರ್ ಮಾಝಿ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿಯು ಬಾಲಭದ್ರ ಮಾಝಿ ಅವರನ್ನು ಅಖಾಡಕ್ಕಿಳಿಸಿದೆ. ಇವರಿಬ್ಬರಿಗೆ ಪೈಪೋಟಿ ನೀಡಲು ಕಾಂಗ್ರೆಸ್ ಪಕ್ಷವು ಭುಜಬಲ್ ಮಾಝಿ ಅವರನ್ನು ಸ್ಪರ್ಧಿಯಾಗಿಸಿದೆ. 2019ರ ಚುನಾವಣೆಯಲ್ಲಿ ಬಿಜೆಡಿಯ ರಮೇಶ್‌ಚಂದ್ರ ಮಾಝಿ ಅವರು, 41,634 ಮತಗಳ ಅಂತರದಿಂದ ಕಾಂಗ್ರೆಸ್‌ನ ಪ್ರದೀಪ್ ಕುಮಾರ್ ಮಾಝಿ ಅವರನ್ನು ಸೋಲಿಸಿದ್ದರು. ಬಾಲಭದ್ರ ಅವರು ಮಾಜಿ ಸಂಸದರಾಗಿದ್ದು, ಸ್ಥಳೀಯವಾಗಿಯೂ ಪ್ರಭಾವಿ ಮುಖಂಡರಾಗಿದ್ದಾರೆ. ಭುಜಬಲ್ ಅವರು ಬುಡಕಟ್ಟು ಮುಖಂಡರಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮುಂದಿರಿಸಿ ಮತಯಾಚಿಸಿದರೆ, ಕೇಂದ್ರ ಸರ್ಕಾರದ ನ್ಯೂನತೆಗಳನ್ನೇ ಪ್ರಮುಖ ವಿಷಯವಾಗಿಸಿ ಕಾಂಗ್ರೆಸ್ ಅಭ್ಯರ್ಥಿ ಮತಯಾಚಿಸುತ್ತಿದ್ದಾರೆ. ಬಿಜೆಡಿ ಅಭ್ಯರ್ಥಿಯು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿರಿಸುತ್ತಿದ್ದಾರೆ. ಮೂವರು ಪ್ರಬಲ ಅಭ್ಯರ್ಥಿಗಳು ಕಣಕ್ಕಿಳಿದಿರುವ ಈ ಕ್ಷೇತ್ರದಲ್ಲಿ ಜನರು ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.