ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರ ಮಹಾತ್ಮೆ: ವಿದಿಶಾ (ಮಧ್ಯಪ್ರದೇಶ)

Published 28 ಮಾರ್ಚ್ 2024, 19:36 IST
Last Updated 28 ಮಾರ್ಚ್ 2024, 19:36 IST
ಅಕ್ಷರ ಗಾತ್ರ

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಮತ್ತೆ ರಾಷ್ಟ್ರ ರಾಜಕಾರಣಕ್ಕೆ ಮರಳಲು ಸನ್ನದ್ಧರಾಗಿದ್ದು, ಇದಕ್ಕಾಗಿ ವಿದಿಶಾ ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಚೌಹಾಣ್‌ ಅವರ ವಿರುದ್ಧ ಕಾಂಗ್ರೆಸ್‌ ಕೂಡ ಪ್ರಬಲ ಅಭ್ಯರ್ಥಿಯಾದ ಪ್ರತಾಪ್‌ ಭಾನು ಶರ್ಮಾ ಅವರನ್ನು ಸ್ಪರ್ಧೆಗಿಳಿಸಿದೆ.

ಹಲವು ವರ್ಷಗಳಿಂದ ಚುನಾವಣಾ ರಾಜಕೀಯದಿಂದ ದೂರವುಳಿದಿದ್ದ ಪ್ರತಾಪ್‌ ಅವರು ಅಖಾಡಕ್ಕಿಳಿದಿರುವುದು ಸ್ಪರ್ಧೆಯನ್ನು ರಂಗೇರಿಸಿದೆ. 1980 ಮತ್ತು 1984ರಲ್ಲಿ ಈ ಕ್ಷೇತ್ರದಿಂದ ಪ್ರತಾಪ್‌ ಅವರು ಲೋಕಸಭೆಗೆ ಆಯ್ಕೆಯಾಗಿದ್ದರು. ಇವರು ಸದ್ಯ ಪಕ್ಷದ ಮಧ್ಯಪ್ರದೇಶ ರಾಜ್ಯ ಘಟಕ ಉಪಾಧ್ಯಕ್ಷರಾಗಿದ್ದಾರೆ. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದ ಪ್ರತಾಪ್‌, ಈ ಕ್ಷೇತ್ರದ ಪ್ರಭಾವಿ ನಾಯಕರಲ್ಲೊಬ್ಬರು.

ಹಲವು ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ವಿದಿಶಾವನ್ನು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ, ವಿದೇಶಾಂಗ ವ್ಯವಹಾರಗಳ ಮಾಜಿ ಸಚಿವೆ ಸುಷ್ಮಾ ಸ್ವರಾಜ್‌ ಅವರೂ ಪ್ರತಿನಿಧಿಸಿದ್ದರು. ಈ ಕಾರಣಕ್ಕಾಗಿಯೇ ಇದು ಬಿಜೆಪಿಯ ಗೆಲುವಿನ ಕ್ಷೇತ್ರ ಎಂದೇ ಬಿಂಬಿತವಾಗಿದೆ. ಚೌಹಾಣ್‌ ಅವರು ಕೂಡ ಇಲ್ಲಿಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿಯ ರಮಾಕಾಂತ್‌ ಭಾರ್ಗವ ಅವರು ಕಾಂಗ್ರೆಸ್‌ನ ಶೈಲೇಂದ್ರ ಪಟೇಲ್‌ ವಿರುದ್ಧ ಭಾರಿ ಅಂತರದಿಂದ ಗೆದ್ದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT