ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರ ಮಹಾತ್ಮೆ: ಮಾಲ್ದಾ ಉತ್ತರ

Published 11 ಏಪ್ರಿಲ್ 2024, 23:30 IST
Last Updated 11 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಪಶ್ಚಿಮ ಬಂಗಾಳದ ಮಾಲ್ದಾ ಉತ್ತರ ಲೋಕಸಭಾ ಕ್ಷೇತ್ರವು ಈ ಬಾರಿ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಬಿಜೆಪಿ, ತೃಣಮೂಲ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ಪ್ರಬಲ ಅಭ್ಯರ್ಥಿಗಳನ್ನೇ ಅಖಾಡಕ್ಕಿಳಿಸಿದೆ. ಬಿಜೆಪಿಯು ಖಗೆನ್‌ ಮುರ್ಮು ಅವರನ್ನೇ ಎರಡನೇ ಬಾರಿಯೂ ಕಣಕ್ಕಿಳಿಸಿದೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಮಾಜಿ ಐಪಿಎಸ್‌ ಅಧಿಕಾರಿ ಪ್ರಸೂನ್‌ ಬ್ಯಾನರ್ಜಿ ಅವರನ್ನು ಅಭ್ಯರ್ಥಿಯನ್ನಾಗಿಸಿದರೆ, ಕಾಂಗ್ರೆಸ್‌ ಮೊಸ್ತಾಕ್‌ ಆಲಂ ಅವರನ್ನು ಸ್ಪರ್ಧೆಗಿಳಿಸಿದೆ. 2019ರ ಚುನಾವಣೆಯಲ್ಲಿ ಖಗೆನ್‌ ಅವರು 84,288 ಮತಗಳ ಅಂತರದಿಂದ ಪ್ರತಿಸ್ಪರ್ಧಿ ಟಿಎಂಸಿಯ ಮೌಸಮ್‌ ನೂರ್‌ ಅವರನ್ನು ಪರಾಭವಗೊಳಿಸಿದ್ದರು. ಒಂದು ಕಾಲದಲ್ಲಿ ಪಕ್ಷದ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ ಮತ್ತೆ ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿದೆ ಕಾಂಗ್ರೆಸ್‌. ಈ ಬಾರಿ ಆಡಳಿತಾರೂಢ ಟಿಎಂಸಿಯ ವಿರುದ್ಧ ಜನರು ತಿರುಗಿ ಬಿದ್ದಿರುವುದರಿಂದ ಪಕ್ಷದ ಅಭ್ಯರ್ಥಿ ಗೆಲ್ಲಬಹುದೆಂಬ ಲೆಕ್ಕಾಚಾರ ಬಿಜೆಪಿ ಮುಖಂಡರದ್ದಾಗಿದೆ. 2006ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದ ಪ್ರಸೂನ್‌ ಅವರು ಸೇವೆಯಿಂದ ನಿವೃತ್ತಿ ಪಡೆದು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದರು. ರಾಜಕೀಯದಲ್ಲಿ ಅನನುಭವಿಯಾದರೂ ರಾಜ್ಯದಲ್ಲಿ ತಮ್ಮ ಪಕ್ಷ ಅಧಿಕಾರದಲ್ಲಿರುವುದರಿಂದ ಇವರು ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಖಗೆನ್‌ ಅವರು ಈ ಹಿಂದೆ ಸಿಪಿಎಂನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ತೀವ್ರ ಕುತೂಹಲ ಮೂಡಿಸಿರುವ ಈ ಕ್ಷೇತ್ರದಲ್ಲಿ ಯಾರು ವಿಜಯಿಗಳಾಗುತ್ತಾರೆ ಎಂಬುದನ್ನು ಕಾದು ನೋಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT