ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರ ಪರಿಚಯ: ಒಡಿಶಾದ ಪುರಿ

Published 23 ಏಪ್ರಿಲ್ 2024, 21:03 IST
Last Updated 23 ಏಪ್ರಿಲ್ 2024, 21:03 IST
ಅಕ್ಷರ ಗಾತ್ರ

ಒಡಿಶಾದ ಪ್ರತಿಷ್ಠಿತ ಕ್ಷೇತ್ರಗಳಲ್ಲೊಂದಾದ ಪುರಿ ಲೋಕಸಭಾ ಕ್ಷೇತ್ರವು ಈ ಬಾರಿ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ.

ಆಡಳಿತಾರೂಢ ಬಿಜು ಜನತಾ ದಳವು (ಬಿಜೆಡಿ) ಮಾಜಿ ಐಪಿಎಸ್‌ ಅಧಿಕಾರಿ ಅರೂಪ್‌ ಪಟ್ನಾಯಕ್‌ ಅವರನ್ನು ಕಣಕ್ಕಿಳಿಸಿದೆ. ಬಿಜೆಪಿಯು ಪಕ್ಷದ ರಾಷ್ಟ್ರೀಯ ವಕ್ತಾರ ಸಂಬಿತ್‌ ಪಾತ್ರಾ ಅವರನ್ನು ಅಖಾಡಕ್ಕಿಳಿಸಿದರೆ, ಕಾಂಗ್ರೆಸ್‌ ಪಕ್ಷವು ಪತ್ರಕರ್ತೆ ಸುಚರಿತಾ ಮೊಹಂತಿ ಅವರನ್ನು ಅಭ್ಯರ್ಥಿಯಾಗಿಸಿದೆ.

2019ರ ಚುನಾವಣೆಯಲ್ಲಿ ಬಿಜೆಡಿಯ ಪಿನಾಕಿ ಮಿಶ್ರಾ ಅವರು 11,714 ಮತಗಳ ಅಂತರದಿಂದ ಸಂಬಿತ್‌ ಪಾತ್ರಾ ಅವರನ್ನು ಪರಾಭವಗೊಳಿಸಿದ್ದರು.

ಮುಂಬೈನ ಮಾಜಿ ಪೊಲೀಸ್‌ ಆಯುಕ್ತರಾಗಿರುವ ಅರೂಪ್‌ ಪಟ್ನಾಯಕ್‌ ಅವರು 2018ರಲ್ಲಿ ಬಿಜೆಡಿ ಸೇರುವ ಮೂಲಕ ರಾಜಕೀಯ ಕ್ಷೇತ್ರಕ್ಕೆ ಕಾಲಿರಿಸಿದ್ದರು. ಆಡಳಿತಾರೂಢ ಪಕ್ಷದ ಅಭಿವೃದ್ಧಿ ಕಾರ್ಯಗಳು ತಮ್ಮ ಕೈಹಿಡಿಯಬಹುದೆಂಬ ವಿಶ್ವಾಸದಲ್ಲಿ ಅರೂಪ್‌ ಅವರಿದ್ದಾರೆ.

ಕಳೆದ ಚುನಾವಣೆಯಲ್ಲಿ ಇವರು ಭುವನೇಶ್ವರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಐಎಎಸ್‌ ಅಧಿಕಾರಿ ಅಪರಾಜಿತಾ ಸಾರಂಗಿ ಅವರು ಅಲ್ಲಿ ಗೆದ್ದಿದ್ದರು. ಸಂಬಿತ್‌ ಪಾತ್ರಾ ಅವರು ಕಳೆದ ಚುನಾವಣೆಯಲ್ಲಿ ಪಿನಾಕಿ ಮಿಶ್ರಾ ಅವರಿಗೆ ತೀವ್ರ ಪೈಪೋಟಿ ನೀಡಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಈ ಬಾರಿ ಮೂರು ಪಕ್ಷಗಳೂ ಪ್ರಬಲ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿರುವುದರಿಂದ ಮತದಾರರು ಯಾರ ಕೈಹಿಡಿಯುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT