ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರ ಮಹಾತ್ಮೆ: ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರ

Published 26 ಮಾರ್ಚ್ 2024, 19:25 IST
Last Updated 26 ಮಾರ್ಚ್ 2024, 19:25 IST
ಅಕ್ಷರ ಗಾತ್ರ

ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರವು ಹಳೆಯ ಸ್ನೇಹಿತರ ನಡುವಣ ಹೋರಾಟದಿಂದ ಗಮನ ಸೆಳೆದಿದೆ. ಭಾರತೀಯ ಜನತಾ ಪಕ್ಷಅಭ್ಯರ್ಥಿ, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರ ವಿರುದ್ದ ಕಾಂಗ್ರೆಸ್‌ ಪಕ್ಷವು ಪ್ರಹ್ಲಾದ್‌ ಗುಂಜಲ್‌ ಅವರನ್ನು ಕಣಕ್ಕಿಳಿಸಿದೆ.

ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗುಂಜಲ್‌ ಕಳೆದ ಗುರುವಾರ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ್ದರು. ಬಿಜೆಪಿ ತೊರೆದು ‘ಕೈ’ ಹಿಡಿಯುವ ವೇಳೆ ಓಂ ಬಿರ್ಲಾ ವಿರುದ್ಧ ಟೀಕಾಪ್ರಹಾರ ಮಾಡಿದ್ದರು. ‘ಕೋಟಾದಲ್ಲಿ ಬಿಜೆಪಿಯು ಒಬ್ಬ ವ್ಯಕ್ತಿ ಮತ್ತು ಒಂದು ಕುಟುಂಬದ ಹಿಡಿತದಲ್ಲಿದೆ’ ಎಂದು ಆರೋಪಿಸಿದ್ದರು. 

ಗುಂಜಲ್‌ ಅವರು ಕೋಟಾ ಉತ್ತರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಎರಡು ಸಲ ಆಯ್ಕೆಯಾಗಿದ್ದರು. 2014 ಮತ್ತು 2019 ರಲ್ಲಿ ಇಲ್ಲಿ ಗೆದ್ದಿದ್ದ ಬಿರ್ಲಾ ಅವರು ‘ಹ್ಯಾಟ್ರಿಕ್‌’ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಕಳೆದ ಸಲ ಅವರು ಕಾಂಗ್ರೆಸ್‌ನ ರಾಮನಾರಾಯಣ ಮೀಲಾ ಎದುರು ಗೆದ್ದಿದ್ದರು. ಕಾಂಗ್ರೆಸ್ ಪಕ್ಷವು ಇಲ್ಲಿ 2009 ರಲ್ಲಿ ಕೊನೆಯದಾಗಿ ಗೆಲುವು ಸಾಧಿಸಿತ್ತು. ಈ ಬಾರಿ ಗುಂಜಲ್‌ ಅವರನ್ನು ಕಣಕ್ಕಿಳಿಸಿ ಬಿಜೆಪಿಗೆ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT