ಗುವಾಹಟಿ (ಪಿಟಿಐ): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಸ್ಸಾಂ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಸ್ಥಳೀಯರ ಭೂಮಿ, ಪರಂಪರೆ ಮತ್ತು ಘನತೆಯನ್ನು ರಕ್ಷಿಸುವ ಹಾಗೂ ಮೂಲಸೌಕರ್ಯ ಕ್ಷೇತ್ರದಲ್ಲಿ ₹5 ಲಕ್ಷ ಕೋಟಿ ಹೂಡಿಕೆಯ ಘೋಷಣೆ ಮಾಡಿದ್ದಾರೆ.

ಅಸ್ಸಾಂನಲ್ಲಿ ಮತ್ತೆ ಅಧಿಕಾರಕ್ಕೇರುವ ಪ್ರಯತ್ನದಲ್ಲಿರುವ ಬಿಜೆಪಿಯು ತನ್ನ ‘ಸಂಕಲ್ಪ ಪತ್ರ’ದಲ್ಲಿ ರಾಜ್ಯದ ಮತದಾರರಿಗೆ 31 ಭರವಸೆಗಳನ್ನು ನೀಡಿದೆ.

‘ಬಾಂಗ್ಲಾದೇಶಿ ಮಿಯಾ’ಗಳು ಅತಿಕ್ರಮಿಸಿರುವ ಭೂಮಿಯನ್ನು ವಶಪಡಿಸಿಕೊಳ್ಳುವುದು, ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಭರವಸೆಗಳು ಪ್ರಣಾಳಿಕೆಯಲ್ಲಿ ಪ್ರಮುಖವಾಗಿವೆ.

ಅಕ್ರಮ ವಲಸಿಗರನ್ನು ಪತ್ತೆಹಚ್ಚುವ ಮತ್ತು ಅವರನ್ನು ರಾಜ್ಯದಿಂದ ಹೊರಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು 1950ರ ವಲಸಿಗರ (ಅಸ್ಸಾಂನಿಂದ ಹೊರಹಾಕುವ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದು ಸ್ಥಳೀಯ ನಿವಾಸಿಗಳ ಭೂಮಿಯನ್ನು ರಕ್ಷಿಸುವ ಪ್ರತಿಜ್ಞೆಯನ್ನು ಮಾಡಲಾಗಿದೆ.

ಅಸ್ಸಾಂ ರಾಜ್ಯವನ್ನು ಪೂರ್ವ ಭಾರತದ ಹೆಬ್ಬಾಗಿಲು ಆಗಿ ಪರಿವರ್ತಿಸಲು ‘ಅಸ್ಸಾಂ ಗತಿ ಶಕ್ತಿ ಮಾಸ್ಟರ್ ಪ್ಲಾನ್’ ಯೋಜನೆಯಡಿ ₹5 ಲಕ್ಷ ಕೋಟಿ ಹೂಡಿಕೆ ಮಾಡುವ ಭರವಸೆಯನ್ನು ನೀಡಲಾಗಿದೆ.

‘ಕಾಂಗ್ರೆಸ್ಗೆ 60 ವರ್ಷಗಳಲ್ಲಿ ಸಾಧಿಸಲು ಆಗದ್ದನ್ನು ಬಿಜೆಪಿಯು ಒಂದು ದಶಕದಲ್ಲಿ ಮಾಡಿ ತೋರಿಸಿದೆ. ರಾಜ್ಯದ ಒಂದು ದಶಕದ ಪರಿವರ್ತನೆಯ ಆಧಾರದ ಮೇಲೆ ಈ ಪ್ರಣಾಳಿಕೆ ಸಿದ್ದಪಡಿಸಲಾಗಿದೆ’ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-51-1173834493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.