ಬಾಗಲಕೋಟೆ: ‘ಕ್ಷೇತ್ರದ ಉಪಚುನಾವಣೆ ನ್ಯಾಯಯುತವಾಗಿ ನಡೆಯುವ ಭರವಸೆ ಇಲ್ಲ. ಅಧಿಕಾರಿಗಳು ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ. ನ್ಯಾಯಯುತ ಚುನಾವಣೆಗಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ’ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕಾರ್ಯಾಧ್ಯಕ್ಷರಾಗಿರುವ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಕಾಲೇಜುಗಳಿಗೆ ಹೋಗಿ, ಬಿಜೆಪಿಗೆ ಮತ ಹಾಕಿದರೆ ಸಜೆ ಅನುಭವಿಸಬೇಕಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಎನ್ಎಸ್ಯುಐ ಮುಖಂಡರು ಧಮ್ಕಿ ಹಾಕಿದ್ದಾರೆ. ಗೂಂಡಾಗಿರಿ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.

‘ಪೊಲೀಸ್ ಠಾಣೆಯಿಂದಲೇ ಎನ್ಎಸ್ಯುಐ ಮುಖಂಡರು ಫೇಸ್ಬುಕ್ ಲೈವ್ ಮಾಡಿದ್ದಾರೆ. ಅದಕ್ಕೆ ಹೇಗೆ ಅನುಮತಿ ನೀಡಲಾಯಿತು? ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿದ್ದು, ಚುನಾವಣೆ ಕರ್ತವ್ಯಕ್ಕೆ ಹೊರ ಜಿಲ್ಲೆಯ ಅಧಿಕಾರಿಗಳ ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದೇವೆ’ ಎಂದು ತಿಳಿಸಿದರು.

‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಪ್ರಚೋದನೆಯಿಂದಲೇ ಈ ಘಟನೆ ನಡೆದಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಬೇಕು. ತಾವು ಮುಖ್ಯಮಂತ್ರಿ ಆಗಬೇಕು ಎಂಬುದು ಅವರ ಯೋಜನೆ’ ಎಂದರು.

‘ಕಾಂಗ್ರೆಸ್ಗೆ ಚುನಾವಣೆಯಲ್ಲಿ ಸೋಲುವ ಭಯ ಎದುರಾಗಿದೆ. ಹೀಗಾಗಿ ನೂರಾರು ಕೋಟಿ ಹಣ ತಂದಿದ್ದು, ಮತದಾರರಿಗೆ ಹಂಚಲು ಸಿದ್ಧತೆ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-19-1970906260

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.