ಬಾಗಲಕೋಟೆ: ಕೇಂದ್ರ ಸರ್ಕಾರ ಹಾಗೂ ಈ ಹಿಂದೆ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರಗಳು ನುಡಿದಂತೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಶನಿವಾರ ಬಾಗಲಕೋಟೆ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಸಂಘ–ಸಂಸ್ಥೆಗಳ ಮುಖಂಡರುಗಳ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ 2014ರಲ್ಲಿ ಹೇಳಿದ್ದನ್ನು ಇಲ್ಲಿಯವರೆಗೂ ಜಾರಿ ಮಾಡಿಲ್ಲ. ಬಡತನ ಹೋಗುತ್ತದೆ. ನಿರುದ್ಯೋಗ ಹೋಗಲಾಡಿಸಲಾಗುತ್ತದೆ. ರೈತರ ಆದಾಯ ದುಪ್ಪಟಾಗುತ್ತದೆ ಎಂದೆಲ್ಲಾ ಹೇಳಿದ್ದರು. ಒಳ್ಳೆಯ ದಿನಗಳು ಬರಲಿಲ್ಲ, ರೈತರ ಆದಾಯವೂ ಎರಡು ಪಟ್ಟು ಆಗಲಿಲ್ಲ. ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿ ಮನೆಗೆ ₹15 ಲಕ್ಷ ಕೊಡುತ್ತೇನೆ ಎಂದಿದ್ದರು. ಕೊಟ್ಟರೇ ಎಂದು ಪ್ರಶ್ನಿಸಿದರು.

ಪ್ರತಿ ವರ್ಷ ₹2 ಕೋಟಿ ಉದ್ಯೋಗ ನೀಡಲಾಗುವುದು ಎಂದು ಹೇಳಲಾ ಗಿತ್ತು. ಇಲ್ಲಿಯವರೆಗೆ ಕೊಟ್ಟಿದ್ದರೆ ದೇಶದಲ್ಲಿ ನಿರುದ್ಯೋಗವೇ ಇರುತ್ತಿಲ್ಲ. ಬಡವರಿಗೆ ಶಕ್ತಿ ತುಂಬವ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬಲು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.

ಸಮಪಾಲು, ಸಮಬಾಳು ಎನ್ನುವ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಮ್ಮ ಸರ್ಕಾರ. ಕೇಂದ್ರ ಸರ್ಕಾರ ಉದ್ಯೋಗದ ಭರವಸೆ ನುಂಗುವ ವಿಬಿಜಿ ರಾಮ್ ಜಿ ಯೋಜನೆ ತಂದಿದೆ. ಕೇಂದ್ರ ಬಿಜೆಪಿಯವರಿಂದ ಕೇವಲ ಕಾರ್ಪೊರೇಟ್ ಶಕ್ತಿಗಳು ಬಲಗೊಳ್ಳುತ್ತಿದ್ದು, ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಟ್ಟುಕೊಂಡಿರುವ ಪಕ್ಷ ನಮ್ಮದು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಹಾಗೂ ಎಲ್ಲರಿಗೂ ಸಮಾನ ರಕ್ಷಣೆ ದೊರೆಯ ಬೇಕು. ಕಾಂಗ್ರೆಸ್ ಸರ್ಕಾರ ನಿರುದ್ಯೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಯುವನಿಧಿ ಯೋಜನೆ ಜಾರಿ ಮಾಡಿದೆ. ಇದನ್ನು ಬಿಜೆಪಿ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರು ನವನಗರದಲ್ಲಿರುವ ಬಾಲಾಜಿ ಮಂದಿರ, ದರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-19-353612589

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.