ಬಾಗಲಕೋಟೆ: ಬಿಜೆಪಿ ಆಯ್ಕೆಯಿಂದ ಮಾತ್ರ ಅಭಿವೃದ್ಧಿ ಸಾಧ್ಯವಿದೆ. ಆಸೆ–ಆಮಿಷಗಳಿಗೆ ಬಲಿಯಾಗದೇ ಬಿಜೆಪಿಗೆ ಮತ ನೀಡಿ ವೀರಣ್ಣ ಚರಂತಿಮಠ ಅವರನ್ನು ಗೆಲ್ಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಹೇಳಿದರು.

ಬಾಗಲಕೋಟೆಯ ಮತಕ್ಷೇತ್ರದ ಬಿಲ್ಕೆರೂರು ಗ್ರಾಮದಲ್ಲಿ ಉಪಚುನಾವಣೆ ಪ್ರಚಾರ ನಡೆಸಿದ ಅವರು, ದಾಖಲೆ ಮಟ್ಟದ ಮತದಾನ ಮಾಡಿ ಬಿಜೆಪಿ ಗೆಲ್ಲಿಸುವ ಹೊಣೆ ನಿಮ್ಮದು. ಹಳ್ಳಿಗಳ ಅಭಿವೃದ್ಧಿಗಾಗಿ ಬಿಜೆಪಿ ಮತ್ತು ವೀರಣ್ಣ ಚರಂತಿಮಠ ಸದಾ ಸಿದ್ಧ. ಕಾಂಗ್ರೆಸ್ಗೆ ತಕ್ಕಪಾಠ ಕಲಿಸಲು ಉತ್ತಮ ಅವಕಾಶ ಸಿಕ್ಕಿದೆ. ಬಳಸಿಕೊಳ್ಳಬೇಕು ಎಂದರು.

ಶಂಭುಗೌಡ ಪಾಟೀಲ, ಹನುಮಗೌಡ ಪಾಟೀಲ, ಬಸವರಾಜ ಪಾಟೀಲ, ಸುಭಾಷ್ ಜಾಲಾಪುರ, ಗ್ಯಾನಪ್ಪಗೌಡ ಪಾಟೀಲ, ಯಲ್ಲನಗೌಡ ಪಾಟೀಲ ಡಾ.ಶೇಖರ ಮಾನೆ, ಕುಮಾರ ಗಿರಿಜಾ ಇದ್ದರು.

ಬಾಗಲಕೋಟೆ ನಗರದಲ್ಲಿ ಪ್ರಚಾರ ನಡೆಸಿದ ಸಂಸದ ಗೋವಿಂದ ಕಾರಜೋಳ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗಿಲ್ಲ. ಈ ಬಾರಿ ಉಪಚುಣಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 50 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ದಲಿತರಿಗಾಗಿ ಮೀಸಲಾದ ಅನುದಾನ ದುರುಪಯೋಗ ಮಾಡಿಕೊಂಡಿದೆ. ಅವರಿಗೆ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ, ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ, ಡಾ.ದೇವರಾಜ ಪಾಟೀಲ, ಅಯ್ಯಪ್ಪ ವಾಲ್ಮೀಕಿ, ಸಲೀಂ ಮೋಮಿನ್, ನರಸಪ್ಪ ಅಂಬಿಗೇರ, ದುರಗಪ್ಪ ನಾಯಕ್, ಹಣಮಂತ ಬಿಚ್ಚಲಿ, ಪರಶು ಕುರಬರ ಇದ್ದರು.

ಆಲೂರು ಎಲ್.ಟಿ. ಗ್ರಾಮದಲ್ಲಿ ಪ್ರಚಾರ ಮಾಡಿದ ಮಾಜಿ ಶಾಸಕ ಪಿ. ರಾಜೀವ್, ಬಂಜಾರ ಸಮುದಾಯದ ಬಗ್ಗೆ ಈ ಸರ್ಕಾರಕ್ಕೆ ಕಾಳಜಿ ಇಲ್ಲ. ಸಮುದಾಯದ ಅಭಿವೃದ್ಧಿಗೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಟೀಕಿಸಿದರು.

ಅಭ್ಯರ್ಥಿ ವೀರಣ್ಣ ಚರಂತಿಮಠ ಮಾತನಾಡಿ, ಮತಕ್ಷೇತ್ರದ ವಿವಿಧ ತಾಂಡಾಗಳಲ್ಲಿ ಸಾಕಷ್ಟು ಅಭವೃದ್ದಿ ಕೆಲಸಗಳನ್ನು ಮಾಡಿದ್ದೇನೆ. ಮತ್ತೇ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದರು.

ಮುಖಂಡ ಹೂವಪ್ಪ ರಾಠೋಡ, ಸೋಮಸಿಂಗ್, ಭೀಮಸಿಂಗ್, ಚಾಪಣ್ಣ ಲಮಾಣಿ, ವೆಂಕಟೇಶ ನಾಯಕ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-19-684604464

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.