ಬಾಗಲಕೋಟೆ: ಉಪಚುನಾವಣೆಯಿಂದಲೇ ಕಾಂಗ್ರೆಸ್ ಪತನ ಶುರುವಾಗಲಿದೆ ಎಂದು ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ ಹೇಳಿದರು.

ಭಾನುವಾರ ನಗರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ವ್ಯಕ್ತವಾಗುತ್ತಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲಲಿದ್ದು, ದುರಾಡಳಿತದ ಸರ್ಕಾರ ಪತನವಾಗಲಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಮಾತನಾಡಿ, ಮುಳುಗಡೆ ಪ್ರದೇಶವಾದ ಬಾಗಲಕೋಟೆ ಸರ್ವಾಂಗೀಣ ಅಭಿವೃದ್ಧಿಯಲ್ಲಿ ವೀರಣ್ಣ ಚರಂತಿಮಠರ ಪರಿಶ್ರಮವಿದೆ. ಅವರಿಗೆ ಬೆಂಬಲಿಸಬೇಕು ಎಂದು ಕೋರಿದರು.

ಮಾಜಿ ಸಚಿವ ರಾಜುಗೌಡ ನಾಯಕ ಮಾತನಾಡಿಮ ಉಪಚುನಾವಣೆಯಲ್ಲಿ ಚರಂತಿಮಠರನ್ನು ಗೆಲ್ಲಿಸಿ ಸಮಗ್ರ ಅಭಿವೃದ್ಧಿಗಾಗಿ ಎಲ್ಲರೂ ಕೈಜೊಡಿಸಬೇಕು ಎಂದರು.

ಮಾಜಿ ಶಾಸಕ ಮಹಾಂತೇಶ ಡೊಡ್ಡಗೌಡರ, ಬಸವರಾಜ ಕಟಗೇರಿ, ಶರಣಪ್ಪ ಕೆರೂರ, ಕಪ್ಪಯ್ಯ ಮುತ್ತಿನಮಠ, ಸಂಗಣ್ಣಗೌಡ ಗೌಡರ, ಪಾಲಾಕ್ಷಿ ಕಟ್ಟಿಮಠ, ಸುಜಾತಾ ಶಿಂಧೆ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-19-1830271326

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.