ಬಾಗಲಕೋಟೆ: ಹಿಂದುತ್ವ ರಕ್ಷಣೆಗೆ, ಮಹಿಳೆಯರ ಭದ್ರತೆಗೆ ಮತ್ತು ಅಭಿವೃದ್ಧಿಗಾಗಿ ಬಿಜೆಪಿ ಗೆಲ್ಲಿಸಬೇಕು. ಚುನಾವಣೆ ಸಂದರ್ಭದಲ್ಲಿ ಕೇಸರಿ ಶಾಲು ಹಾಕುವ ನಕಲಿ ಹಿಂದೂಗಳ ನಾಟಕ ನಡೆಯುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಹೇಳಿದರು.

ನಗರದ ವಿವಿಧೆಡೆ ಮಂಗಳವಾರ ಮತಯಾಚನೆ ಮಾಡಿ ಮಾತನಾಡಿದ ಅವರು, ‘ಕಾಂಗ್ರೆಸ್ಸಿನಲ್ಲಿ ನೀತಿ ಮತ್ತು ನೇತೃತ್ವ ಇಲ್ಲ. ಇದರಿಂದ ಜನರಲ್ಲಿ ನಿರಾಸಕ್ತಿ ಮೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇರುವಷ್ಟು ದುರಹಂಕಾರ ಯಾರಿಗೂ ಇಲ್ಲ. ಎಚ್.ವೈ ಮೇಟಿ ಅವರಿಗೆ ಸಚಿವ ಸ್ಥಾನ ಕೊಟ್ಟು ಕಸಿದುಕೊಂಡಿದ್ದೇಕೇ ಎನ್ನುವುದೇ ಅದಕ್ಕೆ ಸಾಕ್ಷಿ’ ಎಂದರು.

‘ಮೆಡಿಕಲ್ ಕಾಲೇಜು ಜಪ ಮಾಡುವ ಕಾಂಗ್ರೆಸ್ಸಿಗರಿಗೆ ನಾಚಿಕೆಯಾಗಬೇಕು. ಹಿಂದಿನ ನನ್ನ ಅಧಿಕಾರ ಅವಧಿಯಲ್ಲಿ 300 ಹಾಸಿಗೆಯ ಆಸ್ಪತ್ರೆ ನಿರ್ಮಾಣ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿದ್ದೇನೆ. ಈಗ ಚುನಾವಣೆ ಗಿಮಿಕ್ ಮಾಡಲು ಶಾಪಿಂಗ್ ಕಾಂಪ್ಲೆಕ್ಸ್, ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಸುಳ್ಳು ಭರವಸೆ ಕೊಡುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಶಾಸಕ ಸಿದ್ದು ಸವದಿ ಮಾತನಾಡಿ, ‘ಸನಾತನ ಧರ್ಮ ಮತ್ತು ದೇಶದ ರಕ್ಷಣೆಗೆ ಬಿಜೆಪಿ ಸಿದ್ಧವಾಗಿದ್ದು ಬಾಗಲಕೋಟೆ ಸರ್ವಾಂಗೀಣ ಅಭಿವೃದ್ಧಿಗೆ ಚರಂತಿಮಠರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು. ‘ಕಾಂಗ್ರೆಸ್ ಆಡಳಿತದಲ್ಲಿ ಕೋಮು ಗಲಭೆ, ಕೊಲೆ, ಲವ್ ಜಿಹಾದ್, ಅತ್ಯಾಚಾರದಂತಹ ಘಟನೆಗಳು ನಡೆಯುತ್ತಿವೆ.. ಇದು ಜನರಿಗೂ ಅರಿವಾಗಿದೆ. ಮತದಾರರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಪೊಲೀಸರು ಅದರ ಕಡೆ ಗಮನ ನೀಡಬೇಕು’ ಎಂದು ಆಗ್ರಹಿಸಿದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-19-168401189

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.