ಬಾಗಲಕೋಟೆ: ‘ಗೃಹಲಕ್ಷ್ಮಿ ಹಣ ಜಮಾ ಮಾಡುವ ಮೂಲಕ ಸರ್ಕಾರ ಮತದಾರರಿಗೆ ಆಮಿಷವೊಡ್ಡುತ್ತಿದೆ. ಆದರೂ, ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿಯ ಹಣವನ್ನು ಉಪಚುನಾವಣಾ ಸಂದರ್ಭದಲ್ಲಿ ಮತದಾರರ ಖಾತೆಗೆ ಜಮಾ ಮಾಡಲಾಗುತ್ತಿದೆ. ಚುನಾವಣೆಯಲ್ಲಿ ಹಣ ಹಂಚಬಾರದು ಎಂದು ಆಯೋಗ ಹೇಳುತ್ತಿದೆ. ಸರ್ಕಾರದ ಅನುದಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಚುನಾವಣೆ ಮುಗಿಯುವರೆಗೂ ಹಣ ಜಮಾ ಮಾಡಬಾರದು ಎಂದರು.

‘ಚುನಾವಣಾ ಆಯೋಗವೇ ಸ್ವಯಂ ಆಗಿ ದೂರು ದಾಖಲಿಸಿಕೊಳ್ಳಬೇಕಾಗಿತ್ತು. ಅದು ಹಾಗೆ ಮಾಡದ್ದರಿಂದ ಪತ್ರ ಬರೆದು ಆಯೋಗದ ಗಮನಕ್ಕೆ ತರುತ್ತೇನೆ‘ ಎಂದರು.

ಆಯೋಗಕ್ಕೆ ದೂರು ಕೊಡಲಿ: ‘ಗೃಹಲಕ್ಷ್ಮಿ ಯೋಜನೆ ಚುನಾವಣೆ ಸಂದರ್ಭದಲ್ಲಿ ಜಾರಿ ತಂದ ಯೋಜನೆಯಲ್ಲ. ಎರಡೂವರೆ ವರ್ಷಗಳಿಂದ ಫಲಾನುಭವಿಗಳಿಗೆ ಹಣ ಜಮಾ ಮಾಡಲಾಗುತ್ತಿದೆ. ನಿಯಮಿತವಾಗಿ ನಡೆಯುವ ಕಾರ್ಯ ಅದು. ಆಯೋಗಕ್ಕೆ ದೂರು ಕೊಡಲಿ’ ಎಂದು ಸಚಿವ ಎಂ.ಬಿ. ಪಾಟೀಲ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಬಿಹಾರ ಚುನಾವಣೆ ಸಂದರ್ಭದಲ್ಲಿ ₹10 ಸಾವಿರ ಕೋಟಿ ಜಮಾ ಮಾಡಲಾಯಿತಲ್ಲ? ಮಹಾರಾಷ್ಟ್ರದಲ್ಲಿ ಚುನಾವಣೆ ಮುನ್ನ ಮಹಿಳೆಯರ ಖಾತೆಗಳಿಗೆ ಹಣ ಜಮಾ ಮಾಡಿ, ನಂತರ ಯೋಜನೆ ಬಂದ್ ಮಾಡಲಾಯಿತು. ರಾಜ್ಯದಲ್ಲಿ ನಾವು ಹಾಗೆ ಮಾಡಿಲ್ಲ. ಕೊಟ್ಟ ಮಾತಿನಂತೆ ಹಣ ಜಮಾ ಮಾಡುತ್ತಿದ್ದೇವೆ’ ಎಂದು ತಿರುಗೇಟು ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-19-2045413606

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.