ಬಾಗಲಕೋಟೆ: ‘ಬೆಳಿಗ್ಗೆ ಮುಸ್ಲಿಮರ ಜಪ, ಮಧ್ಯಾಹ್ನ ದಲಿತರು ಹಾಗೂ ರಾತ್ರಿ ಹಿಂದುಳಿದವರ ಜಪ ಮಾಡುತ್ತಾರೆ. ಆದರೆ, ಯಾವ ಸಮುದಾಯಗಳಿಗೂ ನ್ಯಾಯ ಕೊಟ್ಟಿಲ್ಲ’ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಮಕ್ಕಳು, ಎಲ್ಲರೂ ಭ್ರಷ್ಟರಾಗಿದ್ದಾರೆ. ಇದನ್ನು ನಾವು ಮಾತನಾಡಬಾರದು. ಆದರೆ, ಜನರಿಗೆ ಆಗುತ್ತಿರುವ ಅನ್ಯಾಯದಿಂದಾಗಿ ಮಾತನಾಡಲೇಬೇಕಿದೆ. ನಮ್ಮ ಜತೆಗಿದ್ದಾಗ ಬಂಗಾರದಂತಿದ್ದ ಸಿದ್ದರಾಮಯ್ಯ ಈಗ ಸತ್ಯ ನಾಶವಾಗಿದ್ದಾರೆ’ ಎಂದು ವ್ಯಂಗ್ಯವಾಡಿದರು.

‘ಹಿಂದೆ ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್ ಅವರೂ ಮುಖ್ಯಮಂತ್ರಿಯಾದಾಗ ಉಚಿತ ಯೋಜನೆಗಳನ್ನು ಜನರಿಗೆ ನೀಡಿದ್ಡರು. ಆರ್ಥಿಕ ಸ್ಥಿತಿ ಬಲಿಷ್ಠವಾಗಿತ್ತು. ಈಗ ಸರಿಯಾಗಿಲ್ಲ. ರಾಜ್ಯಕ್ಕೆ ಹೊರೆಯಾಗುವಂತೆ ಮಾಡುತ್ತಿದ್ದೀರಿ’ ಎಂದು ಆರೋಪಿಸಿದರು.

’ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರನ್ನು ಗೆಲ್ಲಿಸುವುದರ ಮೂಲಕ ಸರ್ಕಾರಕ್ಕೆ ತಕ್ಕಪಾಠ ಕಲಿಸಬೇಕಿದೆ’ ಎಂದರು.

ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ‘ಬಿಜೆಪಿಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬಿಜೆಪಿಯ ಗೆಲುವು ಶತಸಿದ್ಧ’ ಎಂದರು.

ವಿಧಾನ ಪರಿಷತ್ ಅರುಣ ಶಹಾಪುರ, ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾ ಅಧ್ಯಕ್ಷ ಎಸ್.ಟಿ.ಪಾಟೀಲ, ಜಿ.ಎನ್.ಪಾಟೀಲ, ಯಲ್ಲಪ್ಪ ಬೆಂಡಿಗೇರಿ, ಸತ್ಯನಾರಾಯಣ ಹೇಮಾದ್ರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-19-992359874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.