ಬಸವಾಪಟ್ಟಣ: ‘ಪ್ರಬಲ ಸಂಘಟನೆಯ ಮೂಲಕ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಭಾರತವನ್ನು ಬಲಿಷ್ಠಗೊಳಿಸಬೇಕು’ ಎಂದು ಆರ್ಎಸ್ಎಸ್ ದಕ್ಷಿಣ ಪ್ರಾಂತ ಕಾರ್ಯವಾಹ ಪಟ್ಟಾಭಿರಾಮ ಸಲಹೆ ನೀಡಿದರು.

ಇಲ್ಲಿನ ವಿಶ್ವೇಶ್ವರ ಸ್ವಾಮೀಜಿ ಕಲ್ಯಾಣ ಮಂದಿರದಲ್ಲಿ ಸೋಮವಾರ ಏರ್ಪಡಿಸಿದ್ದ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಪ್ರಶಿಕ್ಷಾ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

‘ಚುನಾವಣೆಗಳಲ್ಲಿ ಸಫಲರಾಗಲು ಜಾತಿ, ಧರ್ಮ ಮತ್ತು ಹಣಕ್ಕಿಂತ ಪಕ್ಷ ಸಂಘಟನೆ ಮುಖ್ಯ. ಬಿಜೆಪಿಯ ಧ್ಯೇಯೋದ್ದೇಶಗಳನ್ನು ಜನತೆಗೆ ಸಮರ್ಪಕವಾಗಿ ಮನವರಿಕೆ ಮಾಡಿಕೊಟ್ಟು, ಬಹುಮತದಿಂದ ಪಕ್ಷ ಗೆಲ್ಲುವಂತೆ ಮಾಡುವುದು ಕಾರ್ಯಕರ್ತರ ಮುಖ್ಯ ಕರ್ತವ್ಯ. ಇದನ್ನು ಕಳೆದ ತಿಂಗಳು ನಡೆದ ಪಶ್ಚಿಮ ಬಂಗಾಳ ಚುನಾವಣೆ ಸಾಬೀತುಪಡಿಸಿದೆ. ರಾಜ್ಯದಲ್ಲಿ ಇಂತಹ ಪರಿಣಾಮಕಾರಿ ಸಂಘಟನೆಗೆ ಪಕ್ಷದ ಕಾರ್ಯಕರ್ತರು ಈಗಲೇ ಸಿದ್ಧರಾಗಬೇಕು’ ಎಂದು ಕಿವಿಮಾತು ಹೇಳಿದರು.

‘ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನೂ ಪಶ್ಚಿಮ ಬಂಗಾಳದ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು, 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಬೇಕು. ನಮಗೆ ಅಧಿಕಾರ ಮುಖ್ಯವಲ್ಲ. ದೇಶ ಮೋದೀಜಿ ಆಡಳಿತದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಬೇಕು ಎಂಬ ಉದ್ದೇಶದಿಂದ ಅವಿರತವಾಗಿ ಪ್ರಯತ್ನಿಸಬೇಕು’ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ಅಧ್ಯಕ್ಷತೆ ವಹಿಸಿದ್ದರು.

ಶಾಸಕರಾದ ಬಿ.ಪಿ.ಹರೀಶ್, ಡಿ.ಎಸ್.ಅರುಣ್, ಮಾಜಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಎಸ್.ವಿ.ರಾಮಚಂದ್ರ ಮಾತನಾಡಿದರು. ಮಾಜಿ ಶಾಸಕರಾದ ಎಂ.ಬಸವರಾಜ ನಾಯ್ಕ, ಎಚ್.ಪಿ.ರಾಜೇಶ್, ಆರ್.ಕೆ.ಸಿದ್ರಾಮಣ್ಣ, ವಿಧಾನಸಭಾ ಮಾಜಿ ಸಚೇತಕ ಶಿವಯೋಗಿ ಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಾತಿ ವೀರೇಶ್, ರಾಜನಹಳ್ಳಿ ಶಿವಕುಮಾರ್, ಮಾಯಕೊಂಡ ಮಂಡಲ ಪ್ರಧಾನ ಬಿ.ಜಿ.ಸಚಿನ್, ಮುಖಂಡ ಡಿ.ಆರ್.ಹಾಲೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-43-1630175344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.