ಬೆಂಗಳೂರು: ‘ಸೋಲುವ ಭಯದಿಂದ ಐದು ನಗರ ಪಾಲಿಕೆಗಳ ಚುನಾವಣೆಯನ್ನು ರಾಜ್ಯ ಸರ್ಕಾರ ಮುಂದೂಡುತ್ತಿದೆ. ಇದು ಜನರಿಗೆ ಮಾಡಿದ ದ್ರೋಹ’ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ದೂರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಇದ್ದ 198 ವಾರ್ಡ್ಗಳ ಆಧಾರದ ಮೇಲೆ ಚುನಾವಣೆ ನಡೆಸಿದ್ದರೆ, ಈ ವೇಳೆಗಾಗಲೇ ಚುನಾವಣೆ ಮುಗಿದಿರುತ್ತಿತ್ತು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಅಧಿಕಾರ ಹಸ್ತಾಂತರ ಪೂರ್ಣಗೊಳ್ಳುವ ಮೊದಲು ಚುನಾವಣೆ ನಡೆಯಬಾರದು ಎಂಬ ಬಯಕೆ ಇದೆ. ಕಾಂಗ್ರೆಸ್ ಒಳಜಗಳದ ಪರಿಣಾಮವಾಗಿ ಬೆಂಗಳೂರಿನ ಬೀದಿ ಬೀದಿಗಳಲ್ಲಿ ಕಸದ ರಾಶಿ ಬಿದ್ದಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕೋರ್ಟ್ ಮತ್ತೊಮ್ಮೆ ಕೊನೆಯ ಗಡುವು ನೀಡಿದೆ. ಅಷ್ಟರೊಳಗೆ ಚುನಾವಣೆ ನಡೆಸಬೇಕು. ಬಿಜೆಪಿ ಚುನಾವಣೆಗೆ ಸಂಪೂರ್ಣ ಸಿದ್ಧವಾಗಿದ್ದು, ಕೂಡಲೇ ಚುನಾವಣೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಸಮೀಕ್ಷೆಯಲ್ಲಿ ಗೆಲ್ಲುತ್ತೇವೆ ಎನ್ನುವ ವಿಶ್ವಾಸ ಇದ್ದರೆ ಚುನಾವಣೆ ಏಕೆ ನಡೆಸುತ್ತಿಲ್ಲ? ಏನೇ ಸಮಸ್ಯೆ ಬಂದರೂ ಅದನ್ನು ವಿರೋಧ ಪಕ್ಷಗಳ ಮೇಲೆ ಹಾಕುವುದು ಕಾಂಗ್ರೆಸ್ ಚಾಳಿಯಾಗಿದೆ ಎಂದರು.

ಎಸ್ಐಆರ್ ಹಾಗೂ ಸರ್ವೆ ನೆಪ ಹೇಳಿ ಚುನಾವಣೆ ಮುಂದೂಡುವುದು ಕೇವಲ ರಾಜಕೀಯ ತಂತ್ರ. ಚುನಾವಣೆ ನಡೆಸುವ ಮನಸ್ಸಿದ್ದರೆ ಯಾವುದೂ ದೊಡ್ಡ ಸಮಸ್ಯೆಯಲ್ಲ. ಮೊದಲೇ ನಿಗದಿಪಡಿಸಿದ ವೇಳಾಪಟ್ಟಿಯಂತೆ ಚುನಾವಣೆ ನಡೆಸಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಹಾಲಿನ ದರ ಏರಿಕೆ, ಮದ್ಯದ ದರ, ವಿದ್ಯುತ್ ದರ, ಆಸ್ತಿ ತೆರಿಗೆ ಹೆಚ್ಚಳ, ಹೊಸ ಖಾತಾ ವ್ಯವಸ್ಥೆ ಸೇರಿ ಜನರ ಮೇಲೆ ನಿರಂತರ ಹೊರೆ ಹಾಕಿರುವುದರಿಂದ ಜನರು ಕಾಂಗ್ರೆಸ್ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಅಶೋಕ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-4-1761440708

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.