ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಲು ದುಡ್ಡಿಲ್ಲ ಹಾಗೂ ಸಿಬ್ಬಂದಿಯೂ ಇಲ್ಲ ಎಂದು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ಗೆ ಅಲವತ್ತುಕೊಂಡಿದೆ.

ಚುನಾವಣೆ ನಡೆಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಕುರಿತು ಸುಪ್ರೀಂ ಕೋರ್ಟ್ಗೆ ಗುರುವಾರ ಪ್ರಮಾಣಪತ್ರ ಸಲ್ಲಿಸಿರುವ ಆಯೋಗ, ‘ಜಿಬಿಎ ಚುನಾವಣೆಯನ್ನು ಜೂನ್ 30ರಂದು ಅಥವಾ ಅದಕ್ಕೂ ಮೊದಲು ನಡೆಸಿ ಪೂರ್ಣಗೊಳಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆಯೋಗವು ಚುನಾವಣೆ ನಡೆಸಲು ಯಾವುದೇ ಹಣ ಹೊಂದಿಲ್ಲ. ಚುನಾವಣೆ ನಡೆಸಲು ತುರ್ತಾಗಿ ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ವಿನಂತಿಸಲಾಗಿದೆ’ ಎಂದು ತಿಳಿಸಿದೆ.

ಪಾಲಿಕೆಗಳಿಗೆ ಚುನಾವಣೆ ನಡೆಸುವ ಉದ್ದೇಶಕ್ಕಾಗಿ ಆಯೋಗವು ಲಾಜಿಸ್ಟಿಕ್ ಬೆಂಬಲ, ಸಿಬ್ಬಂದಿ, ಮೂಲಸೌಕರ್ಯ ಮತ್ತು ಹಣಕ್ಕಾಗಿ ರಾಜ್ಯ ಸರ್ಕಾರ ಮತ್ತು ಸರ್ಕಾರದ ಅಧಿಕಾರಿಗಳ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ ಎಂದು ಆಯೋಗ ಹೇಳಿದೆ.

ರಾಜ್ಯದಲ್ಲಿ ಜನ ಗಣತಿ ಕಾರ್ಯವು ಮೇ 15ರೊಳಗೆ ಪೂರ್ಣಗೊಳ್ಳಲಿದೆ.ಐದು ಪಾಲಿಕೆಗಳಿಗೆ ಚುನಾವಣೆ ನಡೆಸುವ ಕಾರ್ಯವು ಮೇ 15ರ ನಂತರವೇ ಆರಂಭವಾಗಲಿದೆ. ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ದಿನಾಂಕಗಳನ್ನು ಭಾರತದ ಚುನಾವಣಾ ಆಯೋಗವು ಇಲ್ಲಿಯವರೆಗೆ ಘೋಷಿಸಿಲ್ಲ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ಈ ಎಲ್ಲ ವಿಷಯಗಳನ್ನು ತಿಳಿಸಲಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಆಯೋಗಕ್ಕೆ ನ್ಯಾಯಪೀಠವು 2026ರ ಜನವರಿ 12ರಂದು ನಿರ್ದೇಶನ ನೀಡಿತ್ತು. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಸಿದ್ಧತಾ ಕಾರ್ಯಗಳನ್ನು ನಡೆಸಲಾಗಿದೆ. ಏಪ್ರಿಲ್ 18ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದೆ. ನ್ಯಾಯಪೀಠದ ಆದೇಶಗಳನ್ನು ಆಯೋಗ ಚಾಚೂತಪ್ಪದೆ ಪಾಲಿಸುತ್ತಿದೆ. ಆದರೆ, ಚುನಾವಣೆ ನಡೆಸಲು ಆಯೋಗದ ಬಳಿ ಸ್ವಂತ ಸಿಬ್ಬಂದಿ ಇಲ್ಲ. ಹಣವೂ ಇಲ್ಲ. ಇದಕ್ಕೆ ರಾಜ್ಯ ಸರ್ಕಾರದ ಬೆಂಬಲ ಅಗತ್ಯ ಎಂದು ಆಯೋಗ ಗಮನ ಸೆಳೆದಿದೆ.

ಐದು ನಗರ ಪಾಲಿಕೆಗಳ ಚುನಾವಣೆಗೆ ಕಾಲಮಿತಿ ಯನ್ನು ವಿಸ್ತರಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರ ಏಪ್ರಿಲ್ 15ರಂದು ಪತ್ರ ಬರೆದಿತ್ತು.

ಮುಖ್ಯ ಕಾರ್ಯದರ್ಶಿಯವರಿಗೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಬರೆದಿರುವ ಪತ್ರ ಉಲ್ಲೇಖಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಜಗದೀಶ್ ಅವರು, ಆಯೋಗದ ಕಾರ್ಯದರ್ಶಿ ಎಸ್. ಹೊನ್ನಾಂಬ ಅವರಿಗೆ ಪತ್ರ ಬರೆದು, ನಗರ ಪಾಲಿಕೆಗಳ ಚುನಾವಣೆಗೆ ಸಮರ್ಪಕವಾಗಿ ಸಿದ್ಧತೆ ನಡೆಸಬೇಕಾಗಿರುವುದರಿಂದ ಕಾಲಮಿತಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಬೇಕು ಎಂದು ತಿಳಿಸಿದ್ದರು.

‘ಜಿಬಿಎ ವ್ಯಾಪ್ತಿಯಲ್ಲಿ ಜನಗಣತಿ ಕಾರ್ಯ ನಡೆಯುತ್ತಿದ್ದು, ಇಡೀ ಆಡಳಿತ ಮತ್ತು ಕ್ಷೇತ್ರಮಟ್ಟದ ಯಂತ್ರವು ಅದರಲ್ಲಿ ತೊಡಗಿಕೊಂಡಿದೆ. ಈ ಚಟುವಟಿಕೆಗಳು ಶಾಸನಬದ್ಧ ಮತ್ತು ಸಮಯಕ್ಕೆ ಸೀಮಿತವಾಗಿರುವುದರಿಂದ ಎಣಿಕೆ, ಮೇಲ್ವಿಚಾರಣೆ, ತರಬೇತಿ ಮತ್ತು ಸಂಪರ್ಕಕ್ಕಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸುವ ಅಗತ್ಯವಿದೆ. ಇದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವ ಸಿದ್ಧತಾ ಕಾರ್ಯಗಳಿಗೆ ಸೀಮಿತ ಅವಕಾಶವಿದ್ದು, ಎಸ್ಐಆರ್ ಸಹ ಏಕಕಾಲದಲ್ಲಿ ಕೈಗೊಳ್ಳುವ ನಿರೀಕ್ಷೆ ಇದೆ. ಇದರ ಜೊತೆಗೆ ಮೇ, ಜೂನ್ನಲ್ಲಿ ಶೈಕ್ಷಣಿಕ ಪರೀಕ್ಷಾ ಕರ್ತವ್ಯಗಳಿಗೆ ಸಿಬ್ಬಂದಿ ನಿಯೋಜಿಸುವು ದರಿಂದ ಲಭ್ಯವಿರುವ ಸಿಬ್ಬಂದಿ ಮತ್ತಷ್ಟು ಕಡಿತವಾಗುವ ಸಾಧ್ಯತೆ ಇದೆ’ ಎಂದು ಜಿಬಿಎ ಮುಖ್ಯ ಆಯುಕ್ತರು ಮುಖ್ಯ ಕಾರ್ಯದರ್ಶಿಯವರಿಗೆ ಏಪ್ರಿಲ್ 8ರಂದು ಪತ್ರ ಬರೆದಿದ್ದರು.

ಈ ಎಲ್ಲ ವಿಷಯಗಳನ್ನು ಆಯೋಗವು ಪ್ರಮಾಣಪತ್ರದಲ್ಲಿ ಉಲ್ಲೇಖಿಸಿದೆ. ಈ ವಿಷಯದ ಬಗ್ಗೆ ನ್ಯಾಯಪೀಠ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿದೆ.

ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್ವಾರು ಮೀಸಲಾತಿಯನ್ನು ಅಂತಿಮಗೊಳಿಸಿ ಅಧಿಸೂಚಿಸಲಾಗಿದೆ ಎಂದು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ಗೆ ಏಪ್ರಿಲ್ 14ರಂದು ಪ್ರಮಾಣಪತ್ರ ಸಲ್ಲಿಸಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-4-621969034

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.