ಬೆಂಗಳೂರು: ‘ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಜೂನ್ 30ರ ಒಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ನಡೆಸಲು ಸಂಬಂಧಿತರಿಗೆ ತಕ್ಷಣವೇ ನಿರ್ದೇಶನ ನೀಡಿ’ ಎಂದು ಜೆಡಿಎಸ್ ಕಾನೂನು ಘಟಕದ ನಿಯೋಗವು ರಾಜ್ಯ ಚುನಾವಣಾ ಆಯುಕ್ತ ಸಿ.ಎಸ್.ಸಂಗ್ರೇಶಿ ಅವರಿಗೆ ಮನವಿ ಸಲ್ಲಿಸಿದೆ.

ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ ನೇತೃತ್ವದಲ್ಲಿ ಸಂಗ್ರೇಶಿ ಅವರನ್ನು ಭೇಟಿ ಮಾಡಿದ್ದ ನಿಯೋಗವು, ‘ಬಿಬಿಎಂಪಿಗೆ ಈ ಹಿಂದೆ ಚುನಾವಣೆ ನಡೆದದ್ದು 2015ರಲ್ಲಿ. ಆ ನಂತರ ರಾಜ್ಯ ಸರ್ಕಾರವು ಒಂದಲ್ಲಾ ಒಂದು ನೆಪವೊಡ್ಡಿ, ಚುನಾವಣೆಯನ್ನು ಮುಂದೂಡುತ್ತಲೇ ಬಂದಿದೆ. ಈಗ ಜನಗಣತಿಯ ಕಾರಣಕ್ಕೆ ಸಿಬ್ಬಂದಿ ಕೊರತೆ ಇದೆ. ಹೀಗಾಗಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎನ್ನುತ್ತಿದೆ. ಇದನ್ನು ಪರಿಗಣಿಸಬಾರದು’ ಎಂದು ಕೋರಿದೆ.

‘ಪಾಲಿಕೆಗಳ ಚುನಾವಣೆ ಸೆಪ್ಟೆಂಬರ್ ಗೆ ಮುಂದೂಡುವಂತೆ ಜಿಬಿಎ ಸರ್ಕಾರಕ್ಕೆ ಪತ್ರ ಬರೆದಿದೆ. ಅದನ್ನು ಆಯೋಗವು ಪರಿಗಣಿಸಿದರೆ, ಸುಪ್ರೀಂ ಕೋರ್ಟ್ನ ನಿರ್ದೇಶನದ ಉಲ್ಲಂಘನೆ ಯಾಗುತ್ತದೆ. ಹೀಗಾಗಿ ಚುನಾವಣೆ ನಡೆಸುವಂತೆ ತಕ್ಷಣವೇ ನಿರ್ದೇಶನ ನೀಡಿ’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-4-1802011341

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.