ಬೆಂಗಳೂರು: ‘ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಜೂನ್ 20ರಿಂದ ಆರಂಭವಾಗಲಿದ್ದು, ಚುನಾವಣಾ ಆಯೋಗ ಸೋಮವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜತೆ ಚರ್ಚೆ ನಡೆಸಿತು.

‘ಮೊದಲ ಹಂತದಲ್ಲಿ 2002ರ ಪಟ್ಟಿಯಲ್ಲಿರುವ ಮತದಾರರ ವಿಳಾಸಕ್ಕೆ ಬಿಎಲ್ಒಗಳು ಗಣತಿ ನಮೂನೆಗಳನ್ನು (ಎನ್ಯುಮರೇಷನ್ ಅರ್ಜಿ) ತಲುಪಿಸಲಿದ್ದಾರೆ. ಪ್ರತಿ ಮತದಾರರಿಗಾಗಿ ಎರಡು ಗಣತಿ ನಮೂನೆಗಳನ್ನು ನೀಡಲಾಗುವುದು. ಮತದಾರರು ಎರಡೂ ನಮೂನೆಗಳನ್ನು ಭರ್ತಿ ಮಾಡಿ, ಒಂದನ್ನು ಬಿಎಲ್ಒಗಳಿಗೆ ನೀಡಬೇಕು ಮತ್ತು ಇನ್ನೊಂದನ್ನು ತಮ್ಮ ಬಳಿಯೇ ಇರಿಸಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋದರೆ, ಈ ಅರ್ಜಿಯ ಆಧಾರದಲ್ಲೇ ಮೇಲ್ಮನವಿ ಸಲ್ಲಿಸಬಹುದು. ಆ ವಿಳಾಸದಲ್ಲಿ ಮತದಾರರು ಇಲ್ಲದಿದ್ದರೆ ಹೊಸ ವಿಳಾಸಕ್ಕೆ ನೀಡುವುದಿಲ್ಲ. ಕರಡು ಪಟ್ಟಿ ಬಿಡುಗಡೆ ನಂತರ ಹೊಸ ವಿಳಾಸ ನಮೂದಿಸಲು ಅವಕಾಶ ಇರುತ್ತದೆ’ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-51-1039246689

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.