ಬೀದರ್: ಬೀದರ್ ಮಹಾನಗರ ಪಾಲಿಕೆಗೆ ಕಲಬುರಗಿಯ ಪ್ರಾದೇಶಿಕ ಆಯುಕ್ತರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿರುವುದು ಹಾಗೂ ಚುನಾವಣೆ ಪ್ರಕ್ರಿಯೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿದ್ದರಿಂದ ರಾಜ್ಯ ಸರ್ಕಾರವು ಅದನ್ನು ವಿಸರ್ಜಿಸಿ, ಪಾಲಿಕೆಗೆ ಕಲಬುರಗಿ ಪ್ರಾದೇಶಿಕ ಆಯುಕ್ತರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿತ್ತು. ಜೊತೆಗೆ ಪಾಲಿಕೆಗೆ ಚುನಾವಣಾ ಪ್ರಕ್ರಿಯೆ ನಡೆಸಲು ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಕಲಬುರಗಿ ಹೈಕೋರ್ಟ್ ಪೀಠದ ಮೊರೆ ಹೋಗಿದ್ದರು. ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿ, ತಡೆಯಾಜ್ಞೆ ನೀಡಿದ್ದು, ಏನಾದರೂ ಆಕ್ಷೇಪಣೆಗಳಿದ್ದರೆ ಎರಡು ವಾರದೊಳಗೆ ಸಲ್ಲಿಸಲು ಸೂಚನೆ ನೀಡಿದೆ. ಇನ್ನೂ ಇದೇ ವಿಷಯವಾಗಿ ಕಾಂಗ್ರೆಸ್ ಸದಸ್ಯರು ಕೂಡ ಕೋರ್ಟ್ ಮೆಟ್ಟಿಲೇರಿದ್ದು, ಅದರ ವಿಚಾರಣೆ ನಡೆಯಬೇಕಿದೆ.

ಬೀದರ್ ನಗರಸಭೆ 2023ರ ಹೊಸದಾಗಿ ಅಸ್ತಿತ್ವಕ್ಕೆ ಬಂದಿತ್ತು. ಇನ್ನೂ ಎರಡೂವರೆ ವರ್ಷ ಅಧಿಕಾರಾವಧಿ ಉಳಿದಿದೆ. ಆದರೆ, ರಾಜ್ಯ ಸರ್ಕಾರ ಹೋದ ವರ್ಷ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿದೆ. ನಿಯಮದ ಪ್ರಕಾರ, ಪಾಲಿಕೆ ಅಸ್ತಿತ್ವಕ್ಕೆ ಬಂದ ಆರು ತಿಂಗಳ ನಂತರ ವಿಸರ್ಜಿಸಿ, ಚುನಾವಣೆ ನಡೆಸಬೇಕು.

ಆದರೆ, ಇನ್ನೂ, ಅವಧಿ ಪೂರ್ಣಗೊಳ್ಳದ ಕಾರಣ ಯಥಾಸ್ಥಿತಿ ಮುಂದುವರಿಸಬೇಕು ಅಥವಾ ಹಾಲಿ ಸದಸ್ಯರನ್ನು ಪಾಲಿಕೆಯ ಕಾರ್ಪೊರೇಟರ್ಗಳಾಗಿ ಪರಿಗಣಿಸಬೇಕೆನ್ನುವುದು ಸದಸ್ಯರ ವಾದ. ಈ ಕಾರಣಕ್ಕಾಗಿಯೇ ಅವರು ಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ.

‘ಜನ ನಮ್ಮ ಮೇಲೆ ಅಪಾರ ನಿರೀಕ್ಷೆಗಳನ್ನು ಇಟ್ಟುಕೊಂಡು ಐದು ವರ್ಷಗಳ ಅವಧಿಗೆ ಆಯ್ಕೆ ಮಾಡಿದ್ದಾರೆ. ಈಗ ಅರ್ಧ ಅವಧಿ ಮುಗಿದಿದೆ. ಅನೇಕ ಯೋಜನೆಗಳು, ಕಾಮಗಾರಿಗಳಿಗೆ ಪ್ರಸ್ತಾವ ಸಲ್ಲಿಸಲಾಗಿದ್ದು, ಬಹುತೇಕವುಗಳಿಗೆ ಅನುಮೋದನೆ ಸಿಕ್ಕಿದೆ. ಇನ್ನೇನು ಕೆಲಸ ಆರಂಭವಾಗಬೇಕು. ಈ ಹಂತದಲ್ಲಿ ವಿಸರ್ಜಿಸಿ, ಚುನಾವಣೆ ನಡೆಸುವುದು ಎಷ್ಟು ಸೂಕ್ತ. ಜನರ ತೀರ್ಪು ಅವಮಾನಿಸಿದಂತಾಗುತ್ತದೆ’ ಎನ್ನುತ್ತಾರೆ ಪಾಲಿಕೆ ಬಿಜೆಪಿ ಸದಸ್ಯ ರಾಜಾರಾಮ ಚಿಟ್ಟಾ, ಜೆಡಿಎಸ್ನ ಶಿವಕುಮಾರ ಭಾವಿಕಟ್ಟಿ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-33-531725063

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.