ಕಮಲನಗರ: ರಾಜ್ಯದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ಕಾನೂನು ಬದ್ಧ, ನ್ಯಾಯಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ ನೀಡಿದರು.

ತಾಲ್ಲೂಕಿನ ದಾಬಕಾ(ಸಿ) ಮತ್ತು ಚೊಂಡಿಮುಖ್ಖೇಡ ಗ್ರಾಮಗಳಿಗೆ ಸೋಮವಾರ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಿ, ನಂತರ ವೋಟರ್ ಐಡಿ ಮ್ಯಾಪಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.

‘ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಇದರನ್ವಯ ಮತದಾರರ ಪಟ್ಟಿಯ ನಿಖರತೆ ಮತ್ತು ನವೀಕೃತ, ಎಲ್ಲರನ್ನೂ ಒಳಗೊಳ್ಳುವಂತೆ ಮಾಡಲಾಗುತ್ತಿದೆ. ಮತದಾರರ ಪಟ್ಟಿ ನವೀಕರಿಸಲು, ಸ್ಥಳಾಂತರಗೊಂಡವರ, ಮೃತಪಟ್ಟವರ ಹೆಸರು ತೆಗೆದು ಹಾಕಲು ಮತ್ತು ಹೊಸ ಅರ್ಹ ಮತದಾರರನ್ನು ಸೇರಿಸಲು ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು. ತಹಶೀಲ್ದಾರ್ ಅಮಿತಕುಮಾರ ಸೇರಿ ಹಲವರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-33-483982284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.