ರಾಂಪುರ: ಸುಳ್ಳು ಹೇಳಿ ಜನರನ್ನು ಹಾದಿ ತಪ್ಪಿಸುವ ಬಿಜೆಪಿ ದೇಶಕ್ಕೆ ಕೊಟ್ಟ ಕೊಡುಗೆ ಶೂನ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬಾಗಲಕೋಟೆ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರವಾಗಿ ಗುರುವಾರ ಬೇವೂರು, ಹಳ್ಳೂರ, ಭೈರಮಟ್ಟಿ ಹಾಗೂ ಬೆನಕಟ್ಟಿ ಗ್ರಾಮಗಳಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಮೋದಿ, ಪ್ರತಿ ವ್ಯಕ್ತಿಯ ಖಾತೆಗೆ ₹15 ಲಕ್ಷ ಹಣ ಹಾಕುವುದಾಗಿ ಮತ್ತು ಪ್ರತಿವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ನೀಡಿದ್ದ ಭರವಸೆಗಳನ್ನು ಇಂದಿಗೂ ಈಡೇರಿಸದೇ ದೇಶದ ಜನತೆಗೆ ಮೋಸ ಮಾಡಿದ್ದಾರೆ ಎಂದ ರಾಮಲಿಂಗಾರೆಡ್ಡಿ, ಹೇಳಿದಂತೆ ಉದ್ಯೋಗ ನೀಡಿದ್ದರೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತಿತ್ತು ಎಂದು ಹೇಳಿದರು.

ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನುಡಿದಂತೆ ನಡೆದು ನೀಡಿದ್ದ ಭರವಸೆ ಈಡೇರಿಸಿದೆ. ಮುಂಬಯಿ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದೆ. ಯುವಕರು ಬಿಜೆಪಿಯ ಬಣ್ಣದ ಮಾತಿಗೆ ಕಿವಿಗೊಡದೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಉಮೇಶ ಮೇಟಿ ಗೆಲ್ಲಿಸಬೇಕು ಎಂದರು.

ಮಾಜಿ ಸಚಿವ ಎಸ್.ಆರ್.ಪಾಟೀಲ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡ ಕುಟುಂಬಗಳಿಗೆ ಆರ್ಥಿಕ ಸಬಲತೆ ನೀಡಿದೆ. ರಾಜ್ಯದ ಅಭಿವೃದ್ಧಿ ಕಾಂಗ್ರೆಸ್ದಿಂದ ಮಾತ್ರ. ಬಿಜೆಪಿ ಬರೀ ಸುಳ್ಳು ಹೇಳಿ ಜನರನ್ನು ಮೋಸಗೊಳಿಸುತ್ತದೆ. ಮತದಾರರು ಆ ಪಕ್ಷ ನಂಬದೇ ಸಜ್ಜನ ರಾಜಕಾರಣಿಯಾಗಿದ್ದ ದಿ.ಎಚ್.ವೈ.ಮೇಟಿ ಅವರ ಪುತ್ರ ಉಮೇಶ ಮೇಟಿ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿ ಎಂದರು.

ಶಾಸಕರಾದ ಜೆ.ಟಿ.ಪಾಟೀಲ, ಎನ್.ಎಚ್.ಕೋನರಡ್ಡಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಮಾತನಾಡಿ, ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆಗಳು, ನೀಡಿರುವ ಜನಪರ ಕಾರ್ಯಕ್ರಮಗಳನ್ನು ತಿಳಿದು ಮತದಾರರು ಉಮೇಶ ಮೇಟಿ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಸಿದ್ದು ಕೊಣ್ಣೂರ, ರಮೇಶ ಬದ್ನೂರ, ಎಂ.ಎಲ್.ಕೆಂಪಲಿಂಗಣ್ಣವರ, ರಮೇಶ ಯಡಹಳ್ಳಿ, ಪಂಡಿತ ಮಾಚಾ, ಮಂಜುಳಾ ಕಮತಗಿ ಹಾಗೂ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-19-1247871291

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.