ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಇದೇ 24 ಕ್ಕೆ ಬೆಂಗಳೂರಿಗೆ ಬರಲಿದ್ದು, ಇಡೀ ದಿನ ಸರಣಿ ಸಭೆಗಳನ್ನು ನಡೆಸುವ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಕಾರ್ಯಕ್ಕೆ ಒತ್ತು ನೀಡಲಿದ್ದಾರೆ.

ಅಧ್ಯಕ್ಷ ಹುದ್ದೆಯ ಚುಕ್ಕಾಣಿ ಹಿಡಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಲಿರುವ ನಿತಿನ್ ನವೀನ್ ಅವರು ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರ ಸಮಿತಿ ಸಭೆಗಳಲ್ಲಿ ವಿಶೇಷವಾಗಿ 2028 ರ ವಿಧಾನಸಭೆ ಚುನಾವಣೆ ಸಿದ್ಧತೆ ನಡೆಸುವ ಕುರಿತೂ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅದೇ ದಿನ ಅವರು ಪ್ರಶಿಕ್ಷಣ ವರ್ಗದ ಸಭೆ ಮತ್ತು ಎಸ್ಐಆರ್ ಕುರಿತ ಸಭೆಯನ್ನೂ ನಡೆಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-4-723731874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.