ಚಾಮರಾಜನಗರ: ಮತದಾರರ ತೀವ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಕೋಟ್ಯಂತರ ಜನರ ಮತದಾನದ ಹಕ್ಕನ್ನು ಕಸಿಯಲು ಕೇಂದ್ರ ಚುನಾವಣಾ ಆಯೋಗ ಹೊರಟಿದೆ ಎಂದು ಎಸ್ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಜನಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಕೆ.ವೆಂಕಟರಾಜು ಆರೋಪಿಸಿದರು.

ಗುರುವಾರ ನಗರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈಗಾಗಲೇ 13 ರಾಜ್ಯಗಳಲ್ಲಿ ಮತದಾರರ ಪಟ್ಟಿಯಿಂದ ಸಮಗ್ರ ಪರಿಷ್ಕರಣೆ ಹೆಸರಿನಲ್ಲಿ 6.5 ಕೋಟಿ ಮತದಾರರನ್ನು ಹೊರಹಾಕಲಾಗಿದೆ. ಪರಿಣಾಮ 5 ಕೋಟಿಗೂ ಹೆಚ್ಚು ಅರ್ಹರು ಮತದಾನದಿಂದ ವಂಚಿತರಾಗಿದ್ದಾರೆ’ ಎಂದು ದೂರಿದರು.

‘ಎಸ್ಐಆರ್ಗೆ ವಿರೋಧ ಇಲ್ಲ. ಆದರೆ ಕ್ಷುಲ್ಲಕ ಕಾರಣ ನೀಡಿ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಹೊರಗಿಡುವುದು ಸರಿಯಲ್ಲ. ಹೊರಗುಳಿದವರಿಗೆ ಸರ್ಕಾರಿ ಸೌಲಭ್ಯಗಳು ಸಿಗುವುದಿಲ್ಲ ಎಂದು ಈಗಾಗಲೇ ಉತ್ತರದ ಹಲವು ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು ಘೋಷಿಸಿರುವುದು ಅಘಾತಕಾರಿ’ ಎಂದರು.

‘ಎಸ್ಐಆರ್ ಪ್ರಕ್ರಿಯೆ ಕ್ಲಿಷ್ಟಕರವಾಗಿದ್ದು ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹಿಂದೆ ಹೆಸರಿತ್ತು, ತಂದೆ ತಾಯಿಯ ಹೆಸರೂ ಇತ್ತು ಎಂಬುದನ್ನು ನಿರೂಪಿಸಬೇಕಿದೆ. ಇಲ್ಲವಾದರೆ ಆಯೋಗ ಕೇಳುವ 11 ದಸ್ತಾವೇಜುಗಳಲ್ಲಿ ಒಂದನ್ನು ಹಾಜರುಪಡಿಸಬೇಕು, ದಾಖಲೆಗಳಿದ್ದರೂ ಸಣ್ಣ ವ್ಯತ್ಯಾಸಗಿದ್ದರೂ ಅನುಮಾನಸ್ಪದ ಮತದಾರರು ಎಂದು ಮತದಾನದ ಹಕ್ಕನ್ನು ನಿರಾಕರಿಸಲಾಗಿದೆ. ಇದುವರೆಗೂ ಮತದಾರರ ಪಟ್ಟಿಯಿಂದ ಹೊರಗುಳಿದವರು ಮಹಿಳೆಯರು, ಅಲೆಮಾರಿಗಳು, ದಲಿತ ಸಮುದಾಯಗಳು ಹಾಗೂ ಗ್ರಾಮೀಣ ಭಾಗದ ಬಡವರು ಹಾಗೂ ಅಲ್ಪಸಂಖ್ಯಾತರಾಗಿದ್ದಾರೆ’ ಎಂದರು. ಸುದ್ದಿಗೋಷ್ಠಿಯಲ್ಲಿ ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಎಸ್ಡಿಪಿಐ ಮುಖಂಡರಾದ ಅಬ್ರಾರ್ ಅಹಮದ್, ಮಹೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-37-475409491

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.