ಚನ್ನರಾಯಪಟ್ಟಣ: ಮತದಾರರ ಪಟ್ಟಿಯನ್ನು ಪಾರದರ್ಶಕ ವಾಗಿರಿಸುವುದು ಎಸ್ಐಆರ್ (ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ಉದ್ದೇಶ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ಜೆಡಿಎಸ್ ಪಕ್ಷದಿಂದ ಏರ್ಪಡಿಸಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಇಂಥ ಮಹತ್ವದ ಪ್ರಕ್ರಿಯೆ ಬಗ್ಗೆ ಗೊಂದಲ ಉಂಟುಮಾಡುವುದು ತರವಲ್ಲ. ಇದರ ಕುರಿತು ಅನಗತ್ಯವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಕಾಂಗ್ರೆಸ್ ಸೇರಿ ಕೆಲವು ವಿರೋಧ ಪಕ್ಷಗಳು ನಕಾರಾತ್ಮಕ ಧೋರಣೆ ತಳೆಯುತ್ತಿವೆ. ಇದನ್ನು ಬಿಟ್ಟು ರಚನಾತ್ಮಕ ಸಲಹೆ ನೀಡಬೇಕು. ಆರಂಭದಿಂದಲೂ ಎಸ್ಐಆರ್ ಕುರಿತು ಗೊಂದಲ ಉಂಟುಮಾಡುವ ಮೂಲಕ ಸಾರ್ವಜನಿಕರನ್ನು ದಾರಿತಪ್ಪಿಸುತ್ತಿವೆ ಎಂದು ದೂರಿದರು.

ವಿರೋಧ ಪಕ್ಷಗಳು ಅಪನಂಬಿಕೆ ಮತ್ತು ವದಂತಿ ಹರಡುತ್ತಿದ್ದಾರೆ. ಇಂಥವರು ತಮ್ಮ ರಾಜಕೀಯ ಲಾಭಕ್ಕಾಗಿ ಯಾವ ರೀತಿ ವರ್ತಿಸುತ್ತಿದ್ದಾರೆ ಎಂಬುದನ್ನು ಜನತೆ ಅರ್ಥಮಾಡಿಕೊಂಡಿದ್ದಾರೆ. ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸುವವರು ಯಾರು ಮತ್ತು ರಾಜಕೀಯ ಗೊಂದಲವನ್ನು ಯಾರು ಸೃಷ್ಟಿಸುತ್ತಿದ್ದಾರೆ ಎಂಬುದು ಜನರಿಗೆ ತಿಳಿಸಿದೆ. ಮತದಾರರು ವದಂತಿಗೆ ಕಿವಿಗೊಡದೆ ಮತದಾನದ ಹಕ್ಕುಗಳ ಬಗ್ಗೆ ಜಾಗೃತರಾಗಬೇಕು ಎಂದು ತಿಳಿಸಿದರು.

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೂತ್ ಮಟ್ಟದ ಮತದಾರರಪಟ್ಟಿಯ ಪರಿಷ್ಕರಣೆಯ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಸಹಕಾರ ನೀಡಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಏಜೆಂಟ್ಗಳು ಜಾಗೃತರಾಗಿ ಕಾರ್ಯನಿರ್ವಹಿಸಬೇಕು ಎಂದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಜ್ಯಾದ್ಯಂತ ಪ್ರವಾಸಮಾಡಿ ಪಕ್ಷದ ಸದಸ್ಯ ನೋಂದಣಿ ಮಾಡುವ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಸಂಘಟಿಸುತಿದ್ದಾರೆ ಎಂದು ಹೇಳಿದರು

ಸಂಪನ್ಮೂಲ ವ್ಯಕ್ತಿಗಳಾದ ವೆಂಕಟೇಶ್, ಅಶ್ವಿನ್ ಮಾತನಾಡಿದರು. ತಾಲ್ಲೂಕು ಜೆಡಿಎಸ್ ಅಧ್ಯಕ್ಷ ದೇವರಾಜೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಆರ್. ವೆಂಕಟೇಶ್, ಮುಖಂಡರಾದ ಕೃಷ್ಣೇಗೌಡ, ಬಿ.ಎಚ್. ಶಿವಣ್ಣ, ವಿ.ಎನ್. ರಾಜಣ್ಣ, ರವೀಶ್, ಚಂದ್ರಪ್ಪ, , ವಿಕ್ಟರ್, ಎಂ.ಬಿ. ತಿಮ್ಮೇಗೌಡ, ಎಂ.ಆರ್. ಅನಿಲ್ಕುಮಾರ್, ಸಿ.ಎನ್. ಮೋಹನ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-36-219717605

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.