ಚಿಕ್ಕಮಗಳೂರು: ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ನೋಡಿಕೊಳ್ಳುವುದು ಹಾಗೂ ಅನರ್ಹ ಮತದಾರರ ಸೇರ್ಪಡೆ ತಡೆಯುವುದು ಪಕ್ಷದ ಕಾರ್ಯಕರ್ತರ ಪ್ರಮುಖ ಜವಾಬ್ದಾರಿ ಎಂದು ವಿಧಾನ ಪರಿಷತ್ ಸದಸ್ಯ ರವಿ ಸಿ.ಟಿ ಹೇಳಿದರು.

ನಗರದ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ಭಾನುವಾರ ನಡೆದ ನಗರ ಮಂಡಲ ಬಿಜೆಪಿ ಸಭೆಯಲ್ಲಿ ಮಾತನಾಡಿದ ಅವರು, ‘ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಕೈಬಿಡದಂತೆ ಎಚ್ಚರಿಕೆ ವಹಿಸಬೇಕು. ಕೆಲವು ಕಡೆಗಳಲ್ಲಿ ಒಂದೇ ವ್ಯಕ್ತಿಯ ಹೆಸರು ಎರಡು ಅಥವಾ ಮೂರು ಕಡೆಗಳಲ್ಲಿ ದಾಖಲಾಗಿರುವ ಮಾಹಿತಿ ಇದೆ. ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಸರಿಪಡಿಸಬೇಕು’ ಎಂದು ತಿಳಿಸಿದರು.

ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯವನ್ನು ಬೂತ್ ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ಪರಿಶೀಲಿಸಬೇಕು. ಮೊದಲು ಮ್ಯಾಪಿಂಗ್ ಆಗದ ಮತದಾರರ ಪಟ್ಟಿಯನ್ನು ಪಡೆದು, ಅರ್ಹರ ಹೆಸರು ಕೈಬಿಟ್ಟಿದ್ದರೆ ತಕ್ಷಣ ಸೇರ್ಪಡೆಗೊಳಿಸುವ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

‘ಒಂದು ಕಾಲದಲ್ಲಿ ಚಿಕ್ಕಮಗಳೂರಿನಲ್ಲಿ ಐದು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತಿತ್ತು. ಈಗ ಕಾಂಗ್ರೆಸ್ ಎಲ್ಲಾ ಸ್ಥಾನಗಳನ್ನು ಗೆದ್ದಿದೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಒಂದು ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ ದೊರೆತಿದೆ. ಹೀಗಾಗಿ ಕಾಂಗ್ರೆಸ್ ಗೆಲುವು ಅದರ ಸಂಘಟನಾ ಸಾಮರ್ಥ್ಯದ ಪ್ರತಿಫಲವಲ್ಲ, ಸಂದರ್ಭದ ಲಾಭವಾಗಿದೆ. ಕಾಂಗ್ರೆಸ್ ಗೆಲುವಿನ ಹಿಂದೆ ತಂತ್ರಗಾರಿಕೆ, ವ್ಯೂಹ ಹಾಗೂ ಕುತಂತ್ರವೂ ಕಾರಣವಾಗಿರಬಹುದು. ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಯಾವುದೇ ಚಕ್ರವ್ಯೂಹವನ್ನು ಭೇದಿಸಬಹುದು’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ನಗರಸಭೆ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಪ್ರತಿಯೊಂದು ವಾರ್ಡ್ನಲ್ಲಿ ಹಿರಿಯರು, ಹೊಸಬರು ಹಾಗೂ ಸಕ್ರಿಯ ಕಾರ್ಯಕರ್ತರನ್ನು ಒಳಗೊಂಡ ಸಮನ್ವಯ ಸಮಿತಿ ರಚಿಸಬೇಕು. ಪ್ರತಿ ವಾರ್ಡ್ನಲ್ಲಿ ಸಭೆ ನಡೆಸಿ, ಹಳೆಯ ಮತ್ತು ಹೊಸ ಕಾರ್ಯಕರ್ತರನ್ನು ಒಗ್ಗೂಡಿಸಬೇಕು. ಹಿರಿಯರ ಅನುಭವ ಮತ್ತು ಯುವಕರ ಉತ್ಸಾಹ ಬಳಸಿಕೊಂಡು ವಾರ್ಡ್ಗಳನ್ನು ಬಿಜೆಪಿಯ ಭದ್ರಕೋಟೆಗಳನ್ನಾಗಿ ಪರಿವರ್ತಿಸಬೇಕು’ ಎಂದರು.

ನಗರಸಭೆ ಸದಸ್ಯರಾಗಲು ಬಯಕೆ ಇರುವವರು ಕೇವಲ ಪಕ್ಷದ ಕಚೇರಿಗೆ ಬಂದರೆ ಸಾಲದು. ಜನರ ನಡುವೆ ಇರಬೇಕು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಜನರ ವಿಶ್ವಾಸ ಗಳಿಸಿದವರ ಹೆಸರನ್ನೇ ಜನ ಟಿಕೆಟ್ಗೆ ಶಿಫಾರಸು ಮಾಡುತ್ತಾರೆ. ಅಂತಹ ವಾತಾವರಣ ನಿರ್ಮಿಸಬೇಕು ಎಂದು ಹೇಳಿದರು.

‘ರಾಂಪುರ ವೃತ್ತದಲ್ಲಿ ಕಾಮಗಾರಿ ಪರಿಶೀಲನೆ ವೇಳೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ಕಾರ್ಯಕರ್ತರನ್ನು ರಾಜಕೀಯ ದ್ವೇಷದಿಂದ ಗುರಿಯಾಗಿಸಿದರೆ ಪಕ್ಷ ಸುಮ್ಮನಿರುವುದಿಲ್ಲ. ಸಂತೋಷ್ ಕೋಟ್ಯಾನ್, ರಾಜೇಶ್ ಸೇರಿ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ಕ್ರಮ ಕೈಗೊಂಡರೆ ಅವರನ್ನು ಏಕಾಂಗಿಯಾಗಿ ಬಿಡುವುದಿಲ್ಲ. ಅಗತ್ಯವಿದ್ದರೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ಬೈಪಾಸ್ ರಸ್ತೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಬಯಲು ಸೀಮೆ ಕೆರೆ ತುಂಬಿಸುವ ಯೋಜನೆ ಸೇರಿ ಜಿಲ್ಲೆಯ ಪ್ರಮುಖ ಅಭಿವೃದ್ಧಿ ಯೋಜನೆಗಳು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿವೆ. ಈ ಅಭಿವೃದ್ಧಿ ಕಾರ್ಯಗಳ ಶ್ರೇಯಸ್ಸು ಬಿಜೆಪಿಗೆ ಸಲ್ಲಬೇಕು. ಜನರಿಗೆ ಈ ವಿಷಯಗಳನ್ನು ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು.

ಬಿಜೆಪಿ ಕಾರ್ಯಕರ್ತರು ವೈಯಕ್ತಿಕ ಆಸೆ-ಆಕಾಂಕ್ಷೆಗಳನ್ನು ಬದಿಗಿಟ್ಟು ಪಕ್ಷದ ಗೆಲುವಿಗಾಗಿ ಕೆಲಸ ಮಾಡಬೇಕು. 35 ವಾರ್ಡ್ಗಳಲ್ಲಿ ಸಂಘಟಿತವಾಗಿ ಕಾರ್ಯನಿರ್ವಹಿಸಿದರೆ 24ರಿಂದ 25 ಸ್ಥಾನಗಳನ್ನು ಗೆಲ್ಲುವುದು ಕಷ್ಟವಲ್ಲ. ಪಕ್ಷದ ಎಲ್ಲ ಕಾರ್ಯಕರ್ತರು ಒಂದು ತಂಡವಾಗಿ ಕೆಲಸ ಮಾಡಿ ಮುಂದಿನ ನಗರಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಜಸಂತಾ ಅನಿಲಕುಮಾರ್, ಮುಖಂಡರಾದ ಸೀತಾರಾಮ ಭರಣ್ಯ, ಕೋಟೆ ರಂಗನಾಥ್, ಕೌಶಿಕ್, ವೆಂಕಟೇಶ್, ಜಯರಾಮ್, ಬಸವರಾಜ್, ಜಗದೀಶ್, ಜಯವರ್ಧನ್ ಸೇರಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-126-1659827343

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.