ಚಿತ್ರದುರ್ಗ: ‘ಉಪ ಚುನಾವಣೆಯ ಫಲಿತಾಂಶವು ಇಲ್ಲಿ ನಡೆಯಲಿರುವ ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮದ ಮೇಲೆ ಪರಿಣಾಮ ಬೀರುವುದಿಲ್ಲ. ಸೋಲಿನಿಂದ ನಾವು ಹತಾಶರಾಗಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಇಲ್ಲಿ ಪ್ರತಿಪಾದಿಸಿದರು.

‘ರಾಜ್ಯ ಸರ್ಕಾರ ಯಾವ ರೀತಿ ಚುನಾವಣೆ ಮಾಡಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಗ್ಯಾರಂಟಿ ಮೇಲೆ ವಿಶ್ವಾಸ ಇದ್ದರೆ ಮುಖ್ಯಮಂತ್ರಿಯವರು ಎರಡೂ ಕ್ಷೇತ್ರಗಳಲ್ಲಿ ಏಕೆ ಕುಳಿತುಕೊಳ್ಳ ಬೇಕಿತ್ತು’ ಎಂದು ಪ್ರಶ್ನಿಸಿದರು.

‘ಬಿಎಸ್ವೈ ಅಭಿಮಾನೋತ್ಸವಕ್ಕೆ ನಿರೀಕ್ಷೆ ಮೀರಿ ಜನ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದ ವಿವಿಧೆಡೆ ಯಿಂದ 10 ಸಾವಿರಕ್ಕೂ ಹೆಚ್ಚು ಬಸ್ಗಳು ಬರಲಿವೆ. 50 ಸಾವಿರ ಕಾರುಗಳು, 5 ಸಾವಿರ ಇತರೆ ವಾಹನಗಳು ಬರಲಿದ್ದು, ಅಂದಾಜು 10 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ’ ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಎರಡು ಕೃತಿ ಬಿಡುಗಡೆ: ‘ಬಿಎಸ್ವೈ ಅಭಿಮಾನೋತ್ಸವದಲ್ಲಿ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ 2 ಕೃತಿಗಳು ಬಿಡುಗಡೆಯಾಗಲಿವೆ. 50 ವರ್ಷಗಳ ಅವರ ರಾಜಕೀಯ ಹೋರಾಟ ಒಳಗೊಂಡ ಜೀವನ ಚರಿತ್ರೆ ‘ಕೆಂದಾವರೆ– ಕಮಲ ಅರಳಿದ ಕಥೆ’ ಕೃತಿಯನ್ನು ಆರ್.ರಘು (ಕೌಟಿಲ್ಯ) ನಿರೂಪಿಸಿದ್ದಾರೆ. ಯಡಿಯೂರಪ್ಪ ಅವರು ಸದನದಲ್ಲಿ ಮಾಡಿದ ಭಾಷಣಗಳ ಸಂಗ್ರಹ ‘ಸದನ ಶಿಕಾರಿ– ಯಡಿಯೂರಪ್ಪನವರ ಗುಡುಗಿನ ನುಡಿಗಳು’ ಕೃತಿ ಆರ್.ರಘು (ಕೌಟಿಲ್ಯ) ಪರಿಕಲ್ಪನೆಯಲ್ಲಿ ಮೂಡಿ ಬಂದಿದ್ದು, ರೇವಯ್ಯ ಒಡೆಯರ್ ಸಂಪಾದಿಸಿದ್ದಾರೆ. ಈ ಕೃತಿಗಳನ್ನು ಕೇಂದ್ರದ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡುವರು’ ಎಂದು ಸಂಸದ ಗೋವಿಂದ ಕಾರಜೋಳ ಇದೇ ವೇಳೆ ತಿಳಿಸಿದರು.

‘ಮೇ 8ರಂದು ಯಡಿಯೂರಪ್ಪ ಅವರು ಚಿತ್ರದುರ್ಗ ಪುರಪ್ರವೇಶ ಮಾಡಲಿದ್ದಾರೆ. 1,008 ಮಹಿಳೆಯರು ಪೂರ್ಣಕುಂಭ ಸ್ವಾಗತ ಕೋರಲಿದ್ದಾರೆ. 200 ಮಹಿಳೆಯರು ಒನಕೆ ಓಬವ್ವನ ಪಾತ್ರಧಾರಿಯಾಗಿ ‘ನಾರಿ ಶಕ್ತಿ ವಂದನ್’ ಕಾಯ್ದೆ ಬೆಂಬಲಿಸಿ ಗೌರವ ಸಲ್ಲಿಸಲಿದ್ದಾರೆ. ಮೆರವಣಿಗೆಯಲ್ಲಿ 25ಕ್ಕೂ ಹೆಚ್ಚು ಕಲಾ ತಂಡಗಳು ಭಾಗವಹಿಸಲಿವೆ’ ಎಂದು ಅವರು ವಿವರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-1359323443

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.