ಚಿತ್ರದುರ್ಗ: ‘ಆಗ್ನೇಯ ಪದವೀಧರ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯೆಂದು ಬಿಜೆಪಿಯ ಕೆ.ಎಂ. ಸುರೇಶ್ ಅವರು ಪದವೀಧರರನ್ನು ಭೇಟಿ ಮಾಡಿ ದಾರಿ ತಪ್ಪಿಸುತ್ತಿದ್ದಾರೆ’ ಎಂದು ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರತಾಪ್ ಜೋಗಿ ಆರೋಪಿಸಿದ್ದಾರೆ.

ಕೆ.ಎಂ. ಸುರೇಶ್ ಕರಪತ್ರ ಮುದ್ರಿಸಿ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಆದರೆ, ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ಅವರು ಸಹ ಎನ್ಡಿಎಯಿಂದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಸ್ಪರ್ಧೆಗೆ ಅವಕಾಶ ಸಿಗುವ ಭರವಸೆ ಅವರಿಗಿದೆ. ಆದ್ದರಿಂದ ಬಿಜೆಪಿ ಅಭ್ಯರ್ಥಿ ಯಾವುದೇ ರೀತಿಯ ಗೊಂದಲ ಸೃಷ್ಟಿಸಿ ಮುಖಂಡರ ದಾರಿ ತಪ್ಪಿಸುವ ಕೆಲಸ ಮಾಡಬಾರದು. ಎನ್ಡಿಎ ಅಭ್ಯರ್ಥಿಯೆಂದು ಚೌಡರೆಡ್ಡಿ ತೂಪಲ್ಲಿ ಅವರನ್ನು ಘೋಷಿಸಿದರೆ ಅತಿಹೆಚ್ಚು ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-44-1463026189

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.