ಚಿತ್ರದುರ್ಗ: ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅಂಗವಾಗಿ ಈಗಾಗಲೇ ಜಿಲ್ಲೆಯಲ್ಲಿ ಶೇ 96ರಷ್ಟು ಮತದಾರರ ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ. ಜೂನ್ 30ರಿಂದ ಜುಲೈ 29ವರೆಗೆ ಬಿಎಲ್ಒಗಳು ಮನೆ–ಮನೆ ಗಣತಿ ಕಾರ್ಯ ಕೈಗೊಳ್ಳಲಿದ್ದು, ಮತದಾರರಿಗೆ ನಮೂನೆ ವಿತರಿಸಲಿದ್ದಾರೆ. ಪ್ರಕ್ರಿಯೆಗೆ ಅನುಕೂಲವಾಗುವಂತೆ ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟರನ್ನು ನೇಮಿಸಬೇಕಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಅರ್ಹ ಮತದಾರರನ್ನು ಮತಪಟ್ಟಿಗೆ ಸೇರಿಸುವುದು ಮತ್ತು ಅನರ್ಹರನ್ನು ನಿಯಮಾನುಸಾರ ಕೈಬಿಡುವುದು ಎಸ್ಐಆರ್ ಪ್ರಕ್ರಿಯೆಯ ಉದ್ದೇಶ. ಯಾವುದೇ ತರಹದ ಸುಳ್ಳು ಮಾಹಿತಿ ಹಾಗೂ ಅಪಪ್ರಚಾರಗಳಿಗೆ ಕಿವಿಗೊಡಬಾರದು. 2002ರಲ್ಲಿ ಮತದಾರರ ಪಟ್ಟಿಯ ಕೊನೆಯ ವಿಶೇಷ ಸಮಗ್ರ ಪರಿಷ್ಕರಣೆ ನಡೆದಿದೆ. ಈ ಮತದಾರರ ಪಟ್ಟಿಯನ್ನು ಆಧರಿಸಿ ಕೌಟುಂಬಿಕ ಸಂಪರ್ಕ (ಫ್ಯಾಮಿಲಿ ಲಿಂಕೇಜ್) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಕುಟುಂಬದ ಮುಖ್ಯಸ್ಥರ ಹೆಸರು 2002ರ ಪಟ್ಟಿಯಲ್ಲಿದ್ದರೆ ಹೊಸದಾಗಿ ಅರ್ಹತೆ ಪಡೆಯುವ ಕುಟುಂಬದ ಇತರ ಸದಸ್ಯರ ಹೆಸರನ್ನು ಸೇರ್ಪಡೆ ಮಾಡುವುದು ಸುಲಭವಾಗುತ್ತದೆ’ ಎಂದರು.

‘ಮದುವೆಯಾಗಿ ಅಥವಾ ವಲಸೆ ಬಂದು ನೆಲೆಸಿರುವವರ ಹೆಸರು ಹಳೆಯ ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ ಅವರಿಗೆ ಕೌಂಟುಂಬಿಕ ಸಂಪರ್ಕ ಸಿಗುವುದಿಲ್ಲ. ಈ ಹಿಂದೆ ಅವರು ವಾಸವಾಗಿದ್ದ ಸ್ಥಳದ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇದ್ದರೆ ಆ ಮಾಹಿತಿಯನುಸಾರ ಹೆಸರು ಸೇರ್ಪಡೆ ಮಾಡಬಹುದು. ಮ್ಯಾಪಿಂಗ್ ಆಗದೆ ಇರುವವರು ಮನೆ ಗಣತಿ ಫಾರಂ ಜೊತೆ ಚುನಾವಣಾ ಆಯೋಗ ನಿಗದಿಪಡಿಸಿದ ಅಧಿಕೃತ ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆ ನೀಡಿದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು’ ಎಂದರು.

‘ಜೂನ್ 20ರಿಂದ 29ರವರೆಗೆ, ತರಬೇತಿ ಹಾಗೂ ಮುದ್ರಣ ತಯಾರಿ ಮಾಡಿಕೊಳ್ಳಲಾಗುವುದು. ಜೂನ್ 30ರಿಂದ ಜುಲೈ 29ರವರೆಗೆ ಒಂದು ತಿಂಗಳು ಜಿಲ್ಲೆಯಾದ್ಯಂತ ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡುವರು. ಈ ವೇಳೆ ಪ್ರತಿ ಮತದಾರರಿಗೂ ಮುದ್ರಿತವಾದ ಎನ್ಯೂಮರೇಷನ್ ಫಾರಂ ನೀಡುವರು. ಇದು ದ್ವಿಪ್ರತಿಯಲ್ಲಿದ್ದು, ಒಂದು ಪ್ರತಿಯನ್ನು ಮತದಾರರಿಗೆ ನೀಡಿ, ಮತ್ತೊಂದು ಪ್ರತಿಯಲ್ಲಿ ಮತದಾರರ ಸಹಿ ಪಡೆದು ತಮ್ಮಲ್ಲಿಯೇ ಇರಿಸಿಕೊಳ್ಳಲ್ಲಿದ್ದಾರೆ. ನಂತರ ಈ ಸಹಿ ಮಾಡಿದ ಫಾರಂ ಸ್ಕ್ಯಾನ್ ಮಾಡಿ ಚುನಾವಣಾ ಆಯೋಗದ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲಾಗುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ತಿಳಿಸಿದರು.

‘ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳಿಂದ ಏಜೆಂಟರ ನೇಮಕ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿದೆ. ಎಸ್ಐಆರ್ ಪ್ರಕ್ರಿಯೆಯಲ್ಲಿ ಪಕ್ಷಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ನಡೆಯುವ ಸಭೆಗಳಲ್ಲಿ ಪಕ್ಷಗಳ ಪ್ರತಿನಿಧಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಪ್ರತಿಯೊಂದು ರಾಜಕೀಯ ಪಕ್ಷಗಳು ತಮ್ಮ ಮಟ್ಟದಲ್ಲಿ ಬೂತ್ ಮಟ್ಟದ ಏಜೆಂಟರನ್ನು ತಕ್ಷಣವೇ ನೇಮಕ ಮಾಡಿ ಸಹಕರಿಸಬೇಕು’ ಎಂದರು.

ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ಬಿ.ಬಿ. ಫಾತಿಮಾ, ಚುನಾವಣೆ ಶಿರೇಸ್ತೆದಾರ್ ಮಲ್ಲಿಕಾರ್ಜುನ್, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಡಿ.ಎನ್. ಮೈಲಾರಪ್ಪ, ಜೆಡಿಎಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಯಶವಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಪಿ.ಎಂ. ಮಂಜುನಾಥ್, ಎಎಪಿ ಮುಖಂಡ ಎಂ.ವಿ. ಲೋಕೇಶ್, ಸಿಪಿಐ(ಎಂ) ಮುಖಂಡ ಗೌಸ್ ಪೀರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-44-1347636131

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.