ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 14 ಏಪ್ರಿಲ್ 2024, 20:45 IST
Last Updated 14 ಏಪ್ರಿಲ್ 2024, 20:45 IST
ಅಕ್ಷರ ಗಾತ್ರ

ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆ ಮಾಡಿದರೆ, ಮುಂದಿನ ಮೂರು ವರ್ಷಗಳಲ್ಲಿ ಛತ್ತೀಸಗಢದಲ್ಲಿ ನಕ್ಸಲರ ಅಟ್ಟಹಾಸವನ್ನು ಸಂಪೂರ್ಣವಾಗಿ ಮಟ್ಟಹಾಕಲಾಗುವುದು. 10 ವರ್ಷಗಳ ಬಿಜೆಪಿ ಆಡಳಿತದಲ್ಲಿ ಮಾವೋವಾದಿಗಳ ಹಿಂಸಾಚಾರವನ್ನು ಕೊನೆಗಾಣಿಸಲಾಗಿದೆ. ಛತ್ತೀಸಗಢದಲ್ಲಿ ಇನ್ನೂ ನಕ್ಸಲರ ಚಟುವಟಿಕೆ ನಡೆಯುತ್ತಿದ್ದು, ಅದಕ್ಕೆ ಅಂತ್ಯಹಾಡಬೇಕಿದೆ.

ಅಮಿತ್‌ ಶಾ, ಕೇಂದ್ರ ಗೃಹಸಚಿವ

ದೇಶದಲ್ಲಿ ಪ್ರಜಾಪ್ರಭುತ್ವವನ್ನು ನಾಶಮಾಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ನಡುವೆ ಯಾವುದೇ ವ್ಯತ್ಯಾಸವಿಲ್ಲ. ವಿರೋಧ ಪಕ್ಷದ ಯಾರೂ ಗೆಲ್ಲಬಾರದು ಎಂದು ಮೋದಿ ಅವರು ಬಯಸುತ್ತಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿರುವುದು ಮೋದಿ ಅವರು ಸಂಸದೀಯ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿರುವುದಕ್ಕೆ ಸಾಕ್ಷಿ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷಕ್ಕೂ, ವಿರೋಧ ಪಕ್ಷಕ್ಕೂ ಸಮಾನ ಪ್ರಾಮುಖ್ಯ ಇರುತ್ತದೆ

ಶರದ್‌ ಪವಾರ್‌, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ

ಶರದ್‌ ಪವಾರ್‌
ಶರದ್‌ ಪವಾರ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT