ರಬಕವಿ ಬನಹಟ್ಟಿ: ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಕೊಡುಗೆ ಅಪಾರವಾಗಿದೆ. ಕಾಂಗ್ರೆಸ್ ಪಕ್ಷ ಕಾರ್ಯಕ್ರಮಗಳನ್ನು ಕೊಡುವ ಪಕ್ಷವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು.

ಶುಕ್ರವಾರ ಸ್ಥಳೀಯ ಕಾಂಗ್ರೆಸ್ ಕಾರ್ಯಾಲಯದ ಆವರಣದಲ್ಲಿ ತೇರದಾಳ ವಿಧಾನ ಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಂಗ್ರೆಸ್ ನೀಡಿದ ಕಾರ್ಯಕ್ರಮಗಳನ್ನು ಪ್ರತಿಯೊಬ್ಬರು ಅನುಭವಿಸುತ್ತಿದ್ಧಾರೆ. ರಾಜ್ಯ ಸರ್ಕಾರ ಪಕ್ಷ, ಜಾತಿ ಭೇದ ಮಾಡದೆ ಎಲ್ಲರಿಗೂ ಗ್ಯಾರಂಟಿಗಳನ್ನು ನೀಡಿದ ಪಕ್ಷ ಕಾಂಗ್ರೆಸ್. ಬಿಜೆಪಿ ಮತದ ಸಲುವಾಗಿ ರಾಜಕಾರಣ ಮಾಡುತ್ತಿದೆ. ನಮಗೆ ಮತ ರಾಜಕಾರಣ ಮುಖ್ಯವಲ್ಲ. ಭಾವೈಕ್ಯದ ಬದುಕು ಮುಖ್ಯವಾಗಿದೆ ಎಂದರು.

ತೇರದಾಳ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡ ಸಿದ್ದು ಕೊಣ್ಣೂರ ಮಾತನಾಡಿ, ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸುವುದರ ಜೊತೆಗೆ ಹಲವಾರು ಕಾರ್ಯಕ್ರಮ ರೂಪಿಸಲಾಗುತ್ತದೆ.. ತೇರದಾಳ ವಿಧಾನ ಸಭಾ ಕ್ಷೇತ್ರದ ಜನರು ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ಶಾಸಕರ ನೀಚ ಕಾರ್ಯಗಳಿಗೆ ಜನರು ಬೇಸತ್ತಿದ್ದಾರೆ ಎಂದರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಭೀಮಶಿ ಮಗದುಮ್, ರಾಜು ಮನ್ನಿಕೇರಿ, ರಾಜು ಭದ್ರನವರ, ಲಕ್ಷ್ಮಣ ದೇಸಾರಟ್ಟಿ ಮಾತನಾಡಿದರು.

ಮಲ್ಲಪ್ಪ ಸಿಂಗಾಡಿ, ಯಲ್ಲನಗೌಡ ಪಾಟೀಲ. ದೇವಲ ದೇಸಾಯಿ, ದಾನಪ್ಪ ಹುಲಜತ್ತಿ, ಸಂಗಮೇಶ ಮಡಿವಾಳ, ನೀಲಕಂಠ ಮುತ್ತೂರ, ನೇಮಣ್ಣ ಸಾವಂತನವರ, ಮಾರುತಿ ಸೋರಗಾವಿ, ಶಂಕರ ಕೆಸರಗೊಪ್ಪ, ಹಾರೂನ್ ಬೇವೂರ, ಶೇಖರ ಹಕ್ಕಲಕದಡ್ಡಿ, ಇರ್ಷಾದ್ ಮೊಮಿನ್ ಸೇರಿದಂತೆ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-19-1222660037

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.