ಬೆಂಗಳೂರು: ಮಹಿಳೆಯರ ಖಾತೆಗೆ ತಿಂಗಳಿಗೆ ₹2 ಸಾವಿರ, 3 ಲಕ್ಷ ಸರ್ಕಾರಿ ಹುದ್ದೆ ಭರ್ತಿ, ಭೂರಹಿತ ರೈತರಿಗೆ ವಾರ್ಷಿಕ ₹6 ಸಾವಿರ ಸೇರಿದಂತೆ ತಮಿಳುನಾಡಿನ ಎಲ್ಲ ವರ್ಗದವರ ಹಿತ ಕಾಪಾಡುವ ಭರವಸೆಗಳನ್ನು ಒಳಗೊಂಡ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚೆನ್ನೈನಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಶಿವಕುಮಾರ್, ‘ಸಂಸದ ಕಾರ್ತಿ ಚಿದಂಬರಂ ಮತ್ತು ಅವರ ತಂಡ ತಮಿಳುನಾಡಿನ ಮೂಲೆ ಮೂಲೆಗೆ ತೆರಳಿ ಎಲ್ಲ ವರ್ಗದ ಜನರನ್ನು ಭೇಟಿ ಮಾಡಿ, ಜನರ ಭಾವನೆ ಅರಿತು ಈ ಪ್ರಣಾಳಿಕೆ ರೂಪಿಸಿದೆ. ಮಹಿಳೆಯರನ್ನು ಸಬಲರನ್ನಾಗಿ ಮಾಡಬೇಕು, ಮಹಿಳೆ ಶಕ್ತಿಶಾಲಿಯಾದರೆ ಕುಟುಂಬ ಶಕ್ತಿಶಾಲಿಯಾಗುತ್ತದೆ. ಕುಟುಂಬ ಶಕ್ತಿಶಾಲಿ ಯಾದರೆ, ಸಮಾಜ ಬಲಿಷ್ಠವಾಗುತ್ತದೆ.ಇದಕ್ಕಾಗಿ ಮಹಿಳೆಯರಿಗೆ ತಿಂಗಳಿಗೆ ₹2 ಸಾವಿರ ನೀಡಲು ತೀರ್ಮಾನಿಸಲಾಗಿದೆ. ನೇರ ಹಣ ವರ್ಗಾವಣೆ ಮೂಲಕ ಮಧ್ಯವರ್ತಿಗಳಿಲ್ಲದೆ ಫಲಾನುಭವಿಗಳಿಗೆ ಹಣ ತಲುಪಿಸಲಾಗುವುದು’ ಎಂದು ಆಶ್ವಾಸನೆ ನೀಡಿದರು.

‘ಆರೋಗ್ಯ, ಮೀನುಗಾರರ ಸಮಸ್ಯೆ, ಭೂ ದಾಖಲೆ ಹಂಚಿಕೆ ಯೋಜನೆಗಳನ್ನೂ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ರಾಜ್ಯದ ಜನರ ಅಗತ್ಯಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗಿದೆ. ನಿರುದ್ಯೋಗಿ ಯುವಕರಿಗಾಗಿ 3 ಲಕ್ಷ ಸರ್ಕಾರಿ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲಾಗುವುದು. ಹುದ್ದೆ ಖಾಲಿಯಾದ 300 ದಿನಗಳಲ್ಲಿ ಅವುಗಳನ್ನು ಭರ್ತಿ ಮಾಡಲಾಗುವುದು. ತಮಿಳುನಾಡಿನ ದೇವಾಲಯಗಳತ್ತ ಜನರನ್ನು ಆಕರ್ಷಿಸಲು ಕಾರ್ಯಕ್ರಮ ರೂಪಿಸಲಾಗುವುದು. ಪಿಂಚಣಿ ಏರಿಕೆ ಮಾಡಲಾಗಿದ್ದು, ಭೂರಹಿತ ರೈತರಿಗೆ ವಾರ್ಷಿಕ ₹6 ಸಾವಿರ ಹಣ ನೀಡಲಾಗುವುದು’ ಎಂದರು.

ನುಡಿದಂತೆ ನಡೆದಿದ್ದೇವೆ: ‘ಕರ್ನಾಟಕದಲ್ಲಿ ನಾವು ಕೊಟ್ಟ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಮೊದಲ ಆರು ತಿಂಗಳ ಒಳಗಾಗಿ ಜಾರಿ ಮಾಡಿದ್ದೇವೆ. ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಬಳಿಕ ಇಡೀ ದೇಶದೆಲ್ಲೆಡೆ ನಮ್ಮ ಮಾದರಿಯನ್ನೇ ಅನುಸರಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ನಮ್ಮ ಮೈತ್ರಿಕೂಟ ಜನಾಶೀರ್ವಾದದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-51-1008796984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.