ಹುಬ್ಬಳ್ಳಿ: ‘ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡದೆ ಅನ್ಯಾಯ ಮಾಡಿದ್ದು, ಇದು ರಾಜ್ಯದಾದ್ಯಂತ ಮುಸ್ಲಿಮ್ ಸಮುದಾಯದ ಅಸಮಾಧಾನಕ್ಕೆ ಕಾರಣವಾಗಿದೆ’ ಎಂದು ಕರ್ನಾಟಕ ಮುಸ್ಲಿಂ ಧ್ವನಿ ಸಂಘಟನೆ ಮುಖ್ಯಸ್ಥ ಅಬ್ದುಲ್ ಕರಿಮ್ ಹೇಳಿದರು.

‘ಮುಸ್ಲಿಂ ಸಮುದಾಯದವರ ಮುಗ್ಧತೆಯನ್ನು ಕಾಂಗ್ರೆಸ್ ದುರುಪಯೋಗ ಮಾಡಿಕೊಳ್ಳುತ್ತಿದೆ. ರಾಜಕೀಯ ಪ್ರಾತಿನಿಧ್ಯ ಕೇಳುವುದು ನಮ್ಮ ಹಕ್ಕಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.

‘ದಾವಣಗೆರೆಯಲ್ಲಿ ಮುಸ್ಲಿಮರು ಬಹುಮತವಿದ್ದರೂ, ಅವರಿಗೇ ಟಿಕೆಟ್ ನೀಡಬೇಕೆಂದು ಮುಸ್ಲಿಮ್ ಮುಖಂಡರ ಒತ್ತಡವಿದ್ದರೂ ಕಾಂಗ್ರೆಸ್ ವರಿಷ್ಠರು ಅದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದೆ ಬೇರೆಯವರಿಗೆ ಟಿಕೆಟ್ ನೀಡಿದ್ದರು. ಚುನಾವಣೆಯಲ್ಲಿ ಮುಸ್ಲಿಮ್ ಮುಖಂಡರು ಪಕ್ಷವಿರೋಧಿ ಕೆಲಸ ಮಾಡಿದ್ದಾರೆ ಎಂದು ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ. ಇದು ಮುಸ್ಲಿಮ್ ವಿರೋಧಿ ನಡೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಯಾವ ಸಮುದಾಯವೂ ಯಾವ ಪಕ್ಷಕ್ಕೂ ಸೀಮಿತವಲ್ಲ, ಬಾಧ್ಯಸ್ಥವೂ ಅಲ್ಲ’ ಎಂದರು. ಮುಖಂಡರಾದ ಅಶ್ರಫಲಿ ಬಶೀರ್ಅಹ್ಮದ್, ಅಹಿಕ್ ಅಹ್ಮದ್, ಬಶೀರ್ಅಹ್ಮದ ಜಹಗೀರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-24-376310781

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.