ಗದಗ: ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತಕ್ಕೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆಯಲ್ಲಿ ಗೆಲುವು ಸಾಧ್ಯವಾಗಿದೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದ್ದಾರೆ.

‘2023ರ ಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ 27,888 (ಶೇ 57.59) ಮತ್ತು ಬಾಗಲಕೋಟೆ 5,878 (ಶೇ 46.57) ಮತಗಳಿಂದ ಗೆಲುವು ಸಾಧಿಸಿದ್ದ ಕಾಂಗ್ರೆಸ್, 2026ರ ಉಪಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ 5,708 (ಶೇ 43.95) ಮತ್ತು ಬಾಗಲಕೋಟೆ 22,332 (ಶೇ 55.41) ಮತಗಳಿಂದ ಭರ್ಜರಿ ಗೆಲುವು ಸಾಧಿಸಿದೆ’ ಎಂದು ತಿಳಿಸಿದ್ದಾರೆ.

ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಂ ನಾಯಕರ ಅಸಮಾಧಾನದಿಂದ ಕಾಂಗ್ರೆಸ್ ಮೇಲೆ ಮುಸ್ಲಿಂ ಸಮುದಾಯದ 80 ಸಾವಿರ ಮತಗಳು ಪರಿಣಾಮ ಬೀರುವುದೇ ಎಂಬ ಅನುಮಾನವನ್ನು ಸುಳ್ಳಾಗಿದೆ. ದಾವಣಗೆರೆಯಲ್ಲಿ ನಾಲ್ಕು ಬಾರಿ ಗೆಲುವು ಸಾಧಿಸಿ, ಅಭಿವೃದ್ಧಿ ಪರ್ವ ಮಾಡಿದ ಶಾಮನೂರು ಕುಟುಂಬವನ್ನು ದಾವಣೆಗೆರೆ ಮತದಾರರು ಕೈ ಹಿಡಿದಿದ್ದಾರೆ’ ಎಂದು ಹೇಳಿದ್ದಾರೆ.

‘2023ರ ದಾವಣಗೆರೆ ದಕ್ಷಿಣ ಚುನಾವಣೆಯಲ್ಲಿ ಕೇವಲ 1,311 ಮತಗಳನ್ನು ಗಳಿಸಿದ್ದ ಎಸ್ಡಿಪಿಐ ಪಕ್ಷವು, ಉಪಚುನಾವಣೆಯಲ್ಲಿ 18,975 ಮತಗಳನ್ನು ಪಡೆದಿದ್ದರಿಂದ ಕಾಂಗ್ರೆಸ್ ಗೆಲುವಿನ ಅಂತರವನ್ನು ಕಡಿಮೆ ಮಾಡಿದೆ’ ಎಂದಿದ್ದಾರೆ.

‘ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಇತಿಹಾಸದಲ್ಲೇ ಮೊದಲ ಬಾರಿಗೆ 2026ರ ಉಪಚುನಾವಣೆಯಲ್ಲಿ 22,332 ಮತಗಳಿಂದ ಗೆಲುವು ಸಾಧಿಸಿ ದಾಖಲೆ ಬರೆದಿದೆ. 2026ರಲ್ಲಿ ನಡೆದ ಎರಡು ಉಪಚುನಾವಣೆಗಳಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಕನ್ನಡಿಗರ ಕಣ್ಮಣಿಯಾಗಿ ಹೊರಹೊಮ್ಮಿದೆ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-23-99255814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.