ಹುಬ್ಬಳ್ಳಿ: ‘ದಾವಣಗೆರೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ವಿರುದ್ಧ ಕಾಂಗ್ರೆಸ್ ವರಿಷ್ಠರು ಏನಾದರೂ ಕ್ರಮಕೈಗೊಂಡರೆ ರಾಜ್ಯದಾದ್ಯಂತ ನಮ್ಮ ಸಂಘಟನೆ ವತಿಯಿಂದ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಾಗುವುದು’ ಎಂದು ಕರ್ನಾಟಕ ಮುಲ್ಲಾ ಅಸೋಸಿಯೇಷನ್ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಶಮೀಮ್ ಮುಲ್ಲಾ ಹೇಳಿದರು.

ಈಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ಮುಸ್ಲಿಂ ಮುಖಂಡರು ಅಪಪ್ರಚಾರ ನಡೆಸಿ, ಸೋಲಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಇಬ್ಬರ ವಿರುದ್ಧ ಕಾಂಗ್ರೆಸ್ ವರಿಷ್ಠರು ಕ್ರಮಕೈಗೊಂಡು, ಅವರಿಂದ ರಾಜೀನಾಮೆ ಪಡೆದಿದ್ದಾರೆ. ಇದೀಗ ಸಚಿವ ಜಮೀರ್ ಅಹಮ್ಮದ್ ಅವರ ವಿರುದ್ಧವೂ ಕ್ರಮ ಕೈಗೊಳ್ಳುವ ಮಾತು ಕೇಳಿ ಬರುತ್ತಿದ್ದು, ವಿವೇಚನಾ ರಹಿತವಾಗಿ ಏನಾದರೂ ಕ್ರಮ ಕೈಗೊಂಡರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು’ ಎಂದು ಎಚ್ಚರಿಸಿದರು.

ಮುಖಂಡರಾದ ಮೌಲಾಲಿ ಮುಲ್ಲಾ, ಸದಾನಂದ ತೇರದಾಳ, ರಮೇಶ ವಡಪಲ್ಲಿ, ಪ್ರಕಾಶ ಕೆ. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-24-1410383830

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.