ವೇಮಗಲ್: ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ ಹಿನ್ನೆಲೆ ಸೋಮವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಿದರು.

ಪಟ್ಟಣದ ಪ್ರಮುಖ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಬಿ.ಉದಯ್ ಶಂಕರ್ ಮಾತನಾಡಿ, ರಾಜ್ಯ ಸರ್ಕಾರದ ಜನಪರ ಆಡಳಿತಕ್ಕೆ ಈ ಫಲಿತಾಂಶ ಕೈಗನ್ನಡಿಯಾಗಿದೆ. ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಈ ಗೆಲುವನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದರು.

ಉಪಚುನಾವಣೆಯ ಈ ಗೆಲುವು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸನ್ನು ತುಂಬಿದ್ದು, ಮುಂದಿನ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಇದು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ವಿ.ಎಂ.ಮುನಿಯಪ್ಪ ಮಾತನಾಡಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪಿರುವುದಕ್ಕೆ ಬಾಗಲಕೋಟೆ ಮತ್ತು ದಾವಣಗೆರೆಯ ಮತದಾರರು ನೀಡಿರುವ ತೀರ್ಪು ಸಾಕ್ಷಿಯಾಗಿದೆ ಎಂದರು.

ಪುರಹಳ್ಳಿ ಗಂಗಪ್ಪ, ನಟರಾಜ್, ಜಮೀರ್, ವೆಂಕಟೇಶ್, ಈಡಿಗರ ರವಿಚಂದ್ರ, ಜೆಸಿಬಿ ಶಶಿಕುಮಾರ್, ಪ್ರಕಾಶ್, ಚೌಡದೇನಹಳ್ಳಿ ಸಂತೋಷ್, ಕುರುಬರಹಳ್ಳಿ ಸಿದ್ದು, ಸಿಂಗೇಹಳ್ಳಿ ಮುರಳಿ, ವೇಮಗಲ್ ಸುಧಾಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-18-168859498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.