ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 23 ಮೇ 2024, 0:50 IST
Last Updated 23 ಮೇ 2024, 0:50 IST
ಅಕ್ಷರ ಗಾತ್ರ

ಜೂನ್‌ 4ರಂದು ಹೊಸ ಸಿನಿಮಾ ಬಿಡುಗಡೆಯಾಗಲಿದೆ. ಅದನ್ನು ದೇಶದ ಜನರು ಹೆಚ್ಚಿನ ಉತ್ಸಾಹದಿಂದ ವೀಕ್ಷಿಸಲಿದ್ದಾರೆ. ಪ್ರತಿ ಹಂತದ ಮತದಾನದಲ್ಲೂ ‘ಇಂಡಿಯಾ’ ಒಕ್ಕೂಟವು ಮುನ್ನಡೆ ಸಾಧಿಸಿದೆ. ಐದು ಹಂತಗಳ ಮತದಾನವು, ಬಿಜೆಪಿ ಸರ್ಕಾರ ಹೊರನಡೆಯುವ ಸೂಚನೆ ನೀಡಿದೆ. ಆರನೇ ಹಂತವು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲಿದೆ. ‘ಇಂಡಿಯಾ’ ಒಕ್ಕೂಟವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಜಾತಿ ಗಣತಿ ನಡೆಸಲಿದೆ

-ಅಖಿಲೇಶ್‌ ಯಾದವ್‌, ಸಮಾಜವಾದಿ ಪಕ್ಷದ ಅಧ್ಯಕ್ಷ

ಪಾಕಿಸ್ತಾನವನ್ನು ಪ್ರಶಂಸಿಸುವವರು ಜೂನ್‌ 4ರಂದು ಆ ದೇಶಕ್ಕೆ ತೆರಳಲು ಬ್ಯಾಗ್‌ಗಳನ್ನು ಸಿದ್ಧಪಡಿಸಿಕೊಳ್ಳಿ. ಪಾಕಿಸ್ತಾನ ಅಣುಬಾಂಬ್‌ ಹೊಂದಿರುವುದರಿಂದ ಅದನ್ನು ಕೆರಳಿಸಬೇಡಿ ಎಂದು ಅವರು ಹೇಳುತ್ತಿದ್ದಾರೆ. ಸಂಕಷ್ಟದಲ್ಲಿರುವ ಆ ದೇಶವು ದೊಡ್ಡ ಆರ್ಥಿಕ ಶಕ್ತಿಯಾಗಿರುವ ಭಾರತಕ್ಕೆ ಬೆದರಿಕೆಯೊಡ್ಡಬಹುದೇ? ರಾಮದ್ರೋಹಿಗಳು ಜಾತಿ ಮತ್ತು ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಬಡವರ ಕಲ್ಯಾಣವಾಗಿದೆ. ಭಾರತವು 80 ಕೋಟಿ ಜನರಿಗೆ ಉಚಿತ ಪಡಿತರ ನೀಡುತ್ತಿದೆ. ಪಾಕಿಸ್ತಾನದ 23 ಕೋಟಿ ಜನರು ಹಸಿವಿನಿಂದ ಬಳಲುತ್ತಿದ್ದಾರೆ

-ಯೋಗಿ ಆದಿತ್ಯನಾಥ, ಉತ್ತರ ಪ್ರದೇಶ ಮುಖ್ಯಮಂತ್ರಿ

ಯೋಗಿ ಆದಿತ್ಯನಾಥ
ಯೋಗಿ ಆದಿತ್ಯನಾಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT