ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಕಾಣುತ್ತಿದ್ದಂತೆಯೇ ಬಿಜೆಪಿ ಜಿಲ್ಲಾ ಘಟಕದ ಮುಖಂಡರಲ್ಲಿನ ಅಸಮಾಧಾನ ಹೊಗೆಯಾಡುತ್ತಿದೆ. ಮತದಾರರ ಎದುರು ವೈಮನಸ್ಸು ಮರೆತು ಒಗ್ಗೂಡಿರುವಂತೆ ಬಿಂಬಿಸಿಕೊಂಡಿದ್ದ ನಾಯಕರು ಮತ್ತೆ ಬಣಗಳಾಗಿ ಬೇರ್ಪಟ್ಟಿದ್ದಾರೆ. ಒಳ ಏಟು ನೀಡಿರುವವರ ಬಗ್ಗೆ ಹೈಕಮಾಂಡ್ಗೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ.

ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಪಕ್ಷದಲ್ಲಿನ ಹುಳುಕುಗಳು ಹೊರಬರತೊಡಗಿವೆ. ಪಕ್ಷದ ಬಾಗಿಲಿಗೆ ಬಂದಿದ್ದ ಗೆಲುವನ್ನು ನಾಯಕರು ಕೈಚಲ್ಲಿದರೇ? ಎಂಬ ಮಾತುಗಳು ಕೇಳಿಬರಲಾರಂಭಿಸಿವೆ. ನಾಯಕರು ಪಕ್ಷದ ವಿರುದ್ಧ ಕೆಲಸ ಮಾಡಿದರೆ ಅಥವಾ ಜವಾಬ್ದಾರಿ ನಿರ್ವಹಿಸದೇ ದೂರ ಉಳಿದರೆ ಎಂಬ ಬಗ್ಗೆ ಕಾರ್ಯಕರ್ತರಲ್ಲಿ ಚರ್ಚೆಗಳು ನಡೆಯುತ್ತಿವೆ.

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ದಕ್ಷಿಣದಲ್ಲಿ ಮಾತ್ರವೇ ಈವರೆಗೆ ಕಮಲ ಅರಳಿಲ್ಲ. 2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯ ಬಳಿಕ ಮುಸ್ಲಿಂ ಬಾಹುಳ್ಯ ಹೊಂದಿದ್ದರಿಂದ ಬಿಜೆಪಿಗೆ ಸವಾಲಾಗಿದೆ. ಶಾಮನೂರು ಶಿವಶಂಕರಪ್ಪ ಅವರ ಬಿಗಿ ಹಿಡಿತದ ಎದುರು 2023ರವರೆಗೆ ಬಿಜೆಪಿಯ ಪ್ರಯತ್ನಕ್ಕೆ ಫಲ ಸಿಕ್ಕಿರಲಿಲ್ಲ. ಶಿವಶಂಕರಪ್ಪ ಅವರ ನಿಧನದಿಂದ ಎದುರಾದ ಉಪಚುನಾವಣೆ ಬಿಜೆಪಿಗೆ ಅವಕಾಶವೊಂದನ್ನು ನೀಡಿತ್ತು.

ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಮುಸ್ಲಿಂ ಸಮುದಾಯ ಮುನಿಸಿಕೊಂಡಿತ್ತು. ಕಾಂಗ್ರೆಸ್ ನಾಯಕರಲ್ಲಿನ ಒಡಕಿನ ಲಾಭ ಪಡೆಯುವ ಹವಣಿಕೆಯಲ್ಲಿದ್ದ ಬಿಜೆಪಿಯ ರಾಜ್ಯ ನಾಯಕರು ಕ್ಷೇತ್ರಕ್ಕೆ ಧಾವಿಸಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ ಪರವಾಗಿ ಬಿರುಸಿನ ಪ್ರಚಾರ ನಡೆಸಿದ್ದರು. ಈ ವೇಳೆ ಕಾಣಿಸಿಕೊಳ್ಳುತ್ತಿದ್ದ ಸ್ಥಳೀಯ ನಾಯಕರು ತಳಮಟ್ಟಕ್ಕೆ ಇಳಿದು ಕೆಲಸ ಮಾಡಲಿಲ್ಲ ಎಂಬ ಮಾತುಗಳು ಈಗ ಕೇಳಿಬಂದಿವೆ.

‘ಲೋಕಸಭಾ ಚುನಾವಣೆಯ ರೀತಿಯಲ್ಲಿಯೇ ದಕ್ಷಿಣ ಕ್ಷೇತ್ರದಲ್ಲಿ ಸೋಲು ಕಂಡಿದ್ದೇವೆ’ ಎಂಬ ಜಿ.ಎಂ. ಸಿದ್ದೇಶ್ವರ ಅವರ ಮಾತಿನಲ್ಲಿ ಹಲವು ಅರ್ಥಗಳಿವೆ. ‘ಆಡಳಿತಾರೂಢ ಪಕ್ಷಗಳೇ ಉಪಚುನಾವಣೆ ಗೆದ್ದಿರುವುದು ರಾಜ್ಯದ ಇತಿಹಾಸ. ಅಧಿಕಾರದಲ್ಲಿದ್ದಾಗ ಬಿಜೆಪಿ ಕೂಡ ಗೆಲುವು ಸಾಧಿಸಿತ್ತು’ ಎಂಬ ಎಂ.ಪಿ. ರೇಣುಕಾಚಾರ್ಯ ಅವರ ಸಮರ್ಥನೆ ಭಿನ್ನವಾಗಿ ಕಾಣುತ್ತಿದೆ.

ಬಿಜೆಪಿ ಅಭ್ಯರ್ಥಿಯಾಗಿದ್ದ ಟಿ.ಶ್ರೀನಿವಾಸ ದಾಸಕರಿಯಪ್ಪ ಅವರು ಜಿ.ಎಂ. ಸಿದ್ದೇಶ್ವರ ಜೊತೆಗೆ ಗುರುತಿಸಿಕೊಂಡಿದ್ದರು. ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ರೇಣುಕಾಚಾರ್ಯ ಆಕ್ಷೇಪ ವ್ಯಕ್ತಪಡಿಸಿದ್ದರು. ಇವರ ಆಪ್ತ ಬಿ.ಜಿ. ಅಜಯ್ಕುಮಾರ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೆಲವೇ ದಿನಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದ ಎಲ್ಲರೂ ಒಗ್ಗೂಡಿ ಚುನಾವಣೆ ಎದುರಿಸುತ್ತಿರುವುದಾಗಿ ಹೇಳಿಕೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-44-115386690

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.