ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಜಾಲಿನಗರ ಹಾಗೂ ಸುರೇಶ್ ನಗರಗಳಲ್ಲಿ ಕಾಲ್ನಡಿಗೆ ಮೂಲಕ ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು.

ಈ ವೇಳೆ ಹಿರಿಯರೊಂದಿಗೆ ಸಮಾಲೋಚನೆ ನಡೆಸಿದ ಅವರು, ‘ಹಿರಿಯರ ಅನುಭವ ಹಾಗೂ ಯುವಜನರ ಆಲೋಚನೆಗಳು ಒಟ್ಟಿಗೆ ಸೇರಿದಾಗ ನಿಜವಾದ ಅಭಿವೃದ್ಧಿ ಸಾಧ್ಯವಾಗಲಿದೆ’ ಎಂದು ಹೇಳಿದರು.

‘ಅನುಭವವೇ ದೊಡ್ಡ ಗುರು ಎಂದು ನನ್ನ ಅಜ್ಜ ಯಾವಾಗಲೂ ಹೇಳುತ್ತಿದ್ದರು. ಆ ನುಡಿಗಳು ಅಕ್ಷರಶಃ ಸತ್ಯವಾಗಿದ್ದು, ಅವರ ಮಾರ್ಗದರ್ಶನವೇ ನನಗೆ ಪ್ರೇರಣೆಯಾಗಿದೆ’ ಎಂದರು.

‘ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸ್ವಾವಲಂಬಿ ಬದುಕು ಸಿಗಬೇಕು ಎಂಬುದು ಕಾಂಗ್ರೆಸ್ ಸರ್ಕಾರದ ಧ್ಯೇಯವಾಗಿದೆ. ಗ್ಯಾರಂಟಿ ಯೋಜನೆ ಗಳಿಂದ ಜನಜೀವನ ಸುಧಾರಿಸಿದೆ. ದಾವಣಗೆರೆ ಜಿಲ್ಲೆಯು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುವಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದ ಪಕ್ಷ ಕಾಂಗ್ರೆಸ್ ಮಾತ್ರ’ ಎಂದರು.

ಈ ವೇಳೆ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸ್ಥಳೀಯರು ಇದ್ದರು.

ರಥೋತ್ಸವದಲ್ಲಿ ಭಾಗಿ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಹಿರೇ ಎಮ್ಮಿಗನೂರು ಗ್ರಾಮದಲ್ಲಿರುವ ಕಲ್ಲೇಶ್ವರ ಸ್ವಾಮಿಯ ರಥೋತ್ಸವದಲ್ಲಿ ಸಮರ್ಥ್ ಶಾಮನೂರು ಅವರು ಭಾಗವಹಿಸಿದ್ದರು. ಮನೆದೇವರಾದ ಕಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಪ್ರಭಾ ಮತಯಾಚನೆ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರವಾಗಿ ವಿವಿಧ ಹಳ್ಳಿಗಳಲ್ಲಿ ವ್ಯಾಪಕವಾಗಿ ಪ್ರಚಾರ ನಡೆಸಿದರು.

ಶಿರಮಗೊಂಡನಹಳ್ಳಿ, ಹೊಸಬೆಳವ ನೂರು ತಾಂಡ, ಬೆಳವನೂರು, ಉಜ್ಜಿನಿಪುರ, ಚಂದ್ರೇನಹಳ್ಳಿಗಳಲ್ಲಿ ಕಾಲ್ನಡಿಗೆ ಮೂಲಕ ಗ್ರಾಮಸ್ಥರನ್ನು ಭೇಟಿ ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದರು.

‘ಪ್ರತಿಯೊಬ್ಬರೂ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸ್ವಾವಲಂಬಿಯಾಗಬೇಕು. ಅಂತಹ ಆಡಳಿತವನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಗ್ಯಾರಂಟಿ ಯೋಜನೆಗಳು ಜನರ ಮನೆಬಾಗಿಲಿಗೆ ತಲುಪಿವೆ. ಕಾಂಗ್ರೆಸ್ ಸರ್ಕಾರ ಶಿಕ್ಷಣ, ಕಾನೂನು ಸುವ್ಯವಸ್ಥೆ ಜೊತೆಗೆ ನೆಮ್ಮದಿಯ ಬದುಕನ್ನು ಒದಗಿಸಿದೆ. ನಮ್ಮ ಆಡಳಿತ ಸದಾ ಸಾಮಾಜಿಕ ನ್ಯಾಯದ ಪರವಾಗಿದೆ’ ಎಂದರು.

ಇದೇ ವೇಳೆ ಬೆಳವನೂರು ಗ್ರಾಮದಲ್ಲಿ ಬಸವೇಶ್ವರ ಸ್ವಾಮಿಯ ರಥೋತ್ಸವದಲ್ಲಿ ಭಾಗವಹಿಸಿದರು. ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-43-448414716

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.