ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಶನಿವಾರ ಚುನಾವಣಾ ಪ್ರಚಾರ ನಡೆಸಿದರು.

ಆನೆಕೊಂಡದ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು, ನಗರದ ನಾಗಮ್ಮ ಕೇಶವಮೂರ್ತಿ ಬಡಾವಣೆ, ಹದಡಿ, ಏಳನೇಕಲ್ಲು, ನಾಗನೂರು ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಈ ವೇಳೆ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಕುಟುಂಬಗಳು ಸಶಕ್ತವಾಗಿವೆ. ಕಾಂಗ್ರೆಸ್ನಿಂದ ಮಾತ್ರ ಅಭಿವೃದ್ಧಿ ಸಾಧ್ಯ’ ಎಂದರು.

ಸಮರ್ಥ್ ಅವರು ಮಟ್ಟಿಕಲ್ಲು ಹಾಗೂ ಆನೆಕೊಂಡ ಸುತ್ತ ಮುತ್ತಲಿನ ಬಡಾವಣೆಗಳಲ್ಲಿ ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿದ ಸಮರ್ಥ್, ‘ಜನಶಕ್ತಿಯೇ ನನ್ನ ಶಕ್ತಿ. ಜನಸಂಪರ್ಕವೇ ನನ್ನ ಪ್ರಮುಖ ಬಲ. ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವುದು ನನ್ನ ಕನಸು. ಜನರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮುಖ್ಯತೆ ನೀಡುತ್ತೇನೆ. ಜನರಿಂದ ದೊರೆತ ಪ್ರೀತಿ ಹಾಗೂ ತಾತ ಶಾಮನೂರು ಶಿವಶಂಕರಪ್ಪ ಅವರ ಮೇಲಿನ ವಿಶ್ವಾಸವು ಜನಸೇವೆಯ ಹಾದಿಯಲ್ಲಿ ಮುಂದುವರಿಯಲು ಪ್ರೇರಣೆ ನೀಡಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-43-682581241

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.