ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣದಿಂದ ಹಿಂದೆ ಸರಿಯುವಂತೆ ಪಕ್ಷೇತರ ಅಭ್ಯರ್ಥಿ ಖಾದರ್ ಆದಿಲ್ ಬಾಷ ಅವರ ಮನವೊಲಿಕೆಗೆ ಕಾಂಗ್ರೆಸ್ ಪ್ರಯತ್ನಿಸಿದೆ. ಭದ್ರಾವತಿ ಶಾಸಕ ಬಿ.ಕೆ. ಸಂಗೇಮಶ್ವರ ಅವರನ್ನು ಸಂಧಾನಕ್ಕೆ ಕಳುಹಿಸಿದ್ದು, ಅಭ್ಯರ್ಥಿ ಜತೆ ಮಾತುಕತೆ ನಡೆದಿದೆ.

‘ಆದಿಲ್ ಬಾಷಾ ಹಾಗೂ ನಾನು ಸ್ನೇಹಿತರು. ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದೆ. ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಿದೆ. ಆದರೆ, ಅವರು ಸಹಮತ ಸೂಚಿಸಲಿಲ್ಲ’ ಎಂದು ಸಂಗಮೇಶ್ವರ ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ಸಿ.ಎಂ. ಇಬ್ರಾಹಿಂ ಅವರು ಭದ್ರಾವತಿಯಲ್ಲಿ ನನ್ನ ಎದುರು ಸ್ಪರ್ಧೆ ಮಾಡಿ ಠೇವಣಿ ಕಳೆದುಕೊಂಡಿದ್ದರು. ಊರಿನ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ ಇಲ್ಲದೇ ಇರುವವರು ಇಲ್ಲಿ ಏನೂ ಮಾಡಬಲ್ಲರು ಎಂಬ ಅರಿವಿದೆ. ಕಾಂಗ್ರೆಸ್ಗೆ ಪ್ರತಿ ಮತ ಕೂಡ ಮುಖ್ಯ. ಹೀಗಾಗಿ ಪಕ್ಷೇತರ ಅಭ್ಯರ್ಥಿಗಳ ಮನವೊಲಿಕೆಗೆ ಪ್ರಯತ್ನ ಮಾಡಲಾಗುತ್ತಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-43-255613781

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.