ಸಿಂಧನೂರು: ‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನೆಪ ಇಟ್ಟುಕೊಂಡು ಮುಸ್ಲಿಂ ಸಮುದಾಯದ ಪ್ರಭಾವಿ ಮುಖಂಡರನ್ನು ಕಾಂಗ್ರೆಸ್ ಪಕ್ಷ ಕಡೆಗಣಿಸುತ್ತಿರುವುದು ಅತ್ಯಂತ ಖಂಡನೀಯ’ ಎಂದು ಮುಸ್ಲಿಂ ಸಮಾಜದ ಹಿರಿಯ ಮುಖಂಡ ಅಬ್ದುಲ್ ಗನಿಸಾಬ್ ದೂರಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೂ ದೇಶದ ಮುಸ್ಲಿಂ ಸಮುದಾಯದವರು ನಿರಂತರವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕೋಮುವಾದಿ ಶಕ್ತಿಗಳ ಪ್ರಭಾವ ಹೆಚ್ಚಾಗಿದ್ದು ಮುಸ್ಲಿಂ ಮುಖಂಡರುಗಳನ್ನು ತುಳಿಯುವ ಪ್ರಯತ್ನ ನಡೆಸಿದ್ದಾರೆ’ ಎಂದು ಆರೋಪಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಮರ ಮತಗಳು ಹೆಚ್ಚಿರುವುದು, ಕಾಂಗ್ರೆಸ್ ಟಿಕೆಟ್ ಕೇಳಿದ್ದು, ಸಮರ್ಥ ಶಾಮನೂರು ಅವರಿಗೆ ಟಿಕೆಟ್ ಸಿಕ್ಕಿದ್ದನ್ನು ವಿವರಿಸಿದ ಅವರು, ‘ಇನ್ನೂ ಫಲಿತಾಂಶ ಹೊರಬಂದಿಲ್ಲ. ಇಂತಹ ಸಂದರ್ಭದಲ್ಲಿ ಎಂಎಲ್ಸಿ ಅಬ್ದಲ್ ಜಬ್ಬಾರ್ ಸೇರಿ ಅನೇಕ ಅಲ್ಪಸಂಖ್ಯಾತರ ಮುಖಂಡರನ್ನು ಅಮಾನತು ಮಾಡಿರುವುದು ಖಂಡನಾರ್ಹ. ಕೂಡಲೇ ಕಾಂಗ್ರೆಸ್ ಹೈಕಮಾಂಡ್ ಅಮಾನತು ಆದೇಶ ಹಿಂಪಡೆದು ಸರಿಪಡಿಸಬೇಕು’ ಎಂದು ಆಗ್ರಹಿಸಿದರು.

‘ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ಅನಿವಾರ್ಯವೇ ಹೊರತು ಅದು ನಮಗಲ್ಲ. ಒಂದು ವೇಳೆ ಮುಸ್ಲಿಂ ಮತದಾರರು ಕಾಂಗ್ರೆಸ್ನಿಂದ ದೂರವಾದರೆ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಧೂಳಿಪಟ ಆಗುವುದರಲ್ಲಿ ಯಾವದೇ ಸಂದೇಹವಿಲ್ಲ’ ಎಂದು ಎಚ್ಚರಿಕೆ ನೀಡಿದರು.

ಮುಸ್ಲಿಂ ಸಮುದಾಯದ ಮುಖಂಡರಾದ ಸೈಯ್ಯದ್ ರಫಿವುದ್ದೀನ್ ಖಾದ್ರಿ, ಶಫಿವುದ್ದೀನ್ ನವಾಬ್, ವಾಜಿದ್ ಖಾನ್, ಬಾಬಾ, ಸೈಯ್ಯದ್ ಫಾರೂಖ್ ಹುಸೇನ್, ದಾವೂದ್ ದೋಟಿಹಾಳ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-32-728175052

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.